ಗದಗ: ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ರೋಣ ಇವರ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ದಿವಾಣಿ ಮತ್ತು ಜೆಎಂಎಫ್ಸಿ ನ್ಯಾಯಾಲಯ ಕಟ್ಟಡದ ಶಂಕುಸ್ಥಾಪನಾ ಸಮಾರಂಭ ನೆರವೇರಿತು.
ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಗದಗ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿಗಳಾದ ವಿ.ಶ್ರೀಶಾನಂದ ಮಾತನಾಡಿ, ಪ್ರತಿಯೊಬ್ಬರಲ್ಲಿರುವ ಆತ್ಮಸಾಕ್ಷಿಯು ನ್ಯಾಯಾಧೀಶರಾಗಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು. ಆತ್ಮ ಸಾಕ್ಷಿಗೆ ಸರಿ ಎನಿಸಿದ್ದನ್ನು ಮಾತ್ರವೇ ಮಾಡಬೇಕು. ಆಸೆಯು ದುರಾಸೆಯಾದಾಗ ಮನುಷ್ಯರು ಕೆಟ್ಟ ದಾರಿ ಹಿಡಿಯುವಂತೆ ಆಗುತ್ತದೆ ಎಂದರು.
ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ರಾಜ್ಯ ವಕೀಲರ ಪರಿಷತ್ ಸದಸ್ಯ ಎಸ್.ಎಸ್.ಮಿಟ್ಟಲಕೋಡ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್.ನೇಮಗೌಡ, ರೋಣ ವಕೀಲರ ಸಂಘದ ಅಧ್ಯಕ್ಷ ವಿ.ಎಸ್. ಬಂಗಾರಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.