ಫೆಂಗಲ್ ಚಂಡಮಾರುತ ಪರಿಣಾಮ ಕಳೆದ ಎರೆಡ್ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಏರ್ಪಟ್ಟಿದೆ. ಅಲ್ಲದೇ ಇಂದೂ ಸಹ ಹಲವು ಜಿಲ್ಲೆಗಳಲ್ಲಿ ಜಿಟಿಜಿಟಿ ಮಳೆಯಾಗಿದೆ.
ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಕೋಲಾರ ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ನೀಡಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಭಾರಿ ಮಳೆ ಹಿನ್ನೆಲೆ ನಾಳೆ ಕೊಡಗು ಜಿಲ್ಲೆಗೆ ರೆಡ್ ಅಲರ್ಟ್, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ರಾಮನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.