ಮೈಸೂರು: ಮೈಸೂರಿನ ಇಟ್ಟಿಗೆ ಗೂಡಿನ ಖಾಸಗಿ ಹೋಟೆಲ್ ನಲ್ಲಿ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಅವರು ಸಚಿವ ಜಮೀರ್ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಕರಿಯ ಎಂದು ಕರೆದು ವಿವಾದಕ್ಕೆ ಕಾರಣವಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕಾಂಗ್ರೆಸ್ ಪಕ್ಷದಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ವಿಚಾರ ಕುರಿತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪರೋಕ್ಷ ಹೇಳಿಕೆ ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಜಮೀರ್ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ ಎಂದು ಖುದ್ದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಕೆ.ಪಿ.ಸಿ.ಸಿ.ಅಧ್ಯಕ್ಷರು ಬೇಕಾದರೆ ಪಕ್ಷದ ಶಿಸ್ತು ಪಾಲನ ಸಮಿತಿಗೆ ವರದಿ ಕೊಟ್ಟರೆ ಶಿಸ್ತುಪಾಲನಾ ಅಧ್ಯಕ್ಷ ರಹೀಂ ಖಾನ್ ಕ್ರಮ ಕೈಗೊಳ್ಳಬಹುದು ಎಂದರು.