ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮೈತ್ರಿಯಾಗಿ ಚುನಾವಣೆಗಳನ್ನು ಎದುರಿಸುತ್ತಾ ಬಂದಿರೋದು ನಿಮಗೆಲ್ಲ ಗೊತ್ತಿರುವ ವಿಚಾರ. ಆದರೆ ಮೊನ್ನೆ ನಡೆದ ಉಪಚುನಾವಣೆಯಲ್ಲಿ ಮೈತ್ರಿ ಕೆಲಸ ಮಾಡಿಲ್ಲ ಅನ್ನೋ ಆರೋಪವಿದೆ. ಆದರೆ ಇದೀಗ ಮತ್ತೇ ಮುಂಬರುವ ಚುನಾವಣೆಗಳಲ್ಲಿಯೂ ಜೆಡಿಎಸ್ – ಬಿಜೆಪಿ ಮೈತ್ರಿ ಮುಂದುವರಿಯುತ್ತಾ ಅನ್ನೋ ಪ್ರಶ್ನೆ ಶುರುವಾಗಿದೆ.
ಹೌದು,ಮುಂದಿನ ವರ್ಷ ರಾಜ್ಯದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳು ನಡೆಯಲಿವೆ.ಇದಕ್ಕೆ ಪುಷ್ಟಿ ನೀಡುವಂತೆ, JDS ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯ BJP ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಮಾತನಾಡಿದ್ದಾರೆ.ಇದಷ್ಟೇ ಅಲ್ಲದೇ,ಸೋಮವಾರ ನಿಖಿಲ್ ಕುಮಾರಸ್ವಾಮಿ ಅಮಿತ್ ಶಾ ಅವರನ್ನೂ ಸಹ ಭೆಟಿ ಆಗಲಿದ್ದಾರೆ ಎನ್ನಲಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ NDA ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ-ಸೂಚನೆ ಪಡೆದುಕೊಳ್ಳಲು ಈ ಭೇಟಿ ಎನ್ನಲಾಗಿದೆ.