ಲಕ್ಷ್ಮೇಶ್ವರ: ಉತ್ತರ ಕರ್ನಾಟಕದ ಸಹ್ಯಾದ್ರಿ ಕಪ್ಪತ್ತಗುಡ್ಡದಲ್ಲಿ ೧೦ ಕಿಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕ ವೈದ್ಯರ ಸಂಘದ ವತಿಯಿಂದ ತಹಸೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಗದಗ ಜಿಲ್ಲೆಯ ಕಪ್ಪತಗುಡ್ಡದ ವಿಶಾಲವಾದ ಪ್ರದೇಶದಲ್ಲಿ ಅಪರೂಪದ ನೂರಾರು ಜಾತಿಯ ಪ್ರಾಣಿ-ಪಕ್ಷಿಗಳು, ಸರಿಸೃಪಗಳು ಹಾಗೂ ೫೦೦ಕ್ಕೂ ಹೆಚ್ಚು ಔಷಧಿ ಸಸ್ಯರಾಶಿಯೂ ಗಿಡಮೂಲಿಕೆಗಳು ಮತ್ತು ಬಗೆ ಬಗೆಯ ಪ್ರಭೇದಗಳ ಮರಗಳು ಇದ್ದು, ಸದ್ಯ ವನ್ಯಜೀವಿಧಾಮದ ಕಾನೂನು ಪ್ರಕಾರ ಸಂರಕ್ಷಿತ ಜೀವ ವೈವಿಧ್ಯತಾ ತಾಣವನ್ನಾಗಿ ವಿಸ್ತರಿಸುವುದು ಮತ್ತು ಅದರ ಪರಿಧಿಯ ೧೦ ಕಿಲೋ ಮೀಟರ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ಕೈಗೊಳ್ಳದಂತೆ ನಿಷೇಧಿಸಲು ಕ್ರಮ ಕೈಗೊಳ್ಳಬೇಕು.
ಕಪ್ಪತ್ತಗುಡ್ಡದಲ್ಲಿ ಮತ್ತೆ ಗಣಿಗಾರಿಕೆಗೆ ಅನುಮತಿ ನೀಡಲು ಸಂಚು ನಡೆದಿದ್ದು ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು, ಕಪ್ಪತಗುಡ್ಡ ವನ್ಯಜೀವಿಧಾಮ ೧೦ ಕಿಲೋ ಮೀಟರ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ಕೈಗೊಳ್ಳದಂತೆ ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ತಕ್ಷಣ ನಿರ್ಧಾರ ಕೈಗೊಳ್ಳಬೇಕು.
ಸಾವಿರಾರು ಬಗೆಯ ಖನಿಜಗಳು ಕಪ್ಪತಗುಡ್ಡದ ಗರ್ಭದಲ್ಲಿದ್ದು ಬಂಡವಾಳಶಾಹಿಯ ರಕ್ಷಿಸುವ ನಿಟ್ಟಿನಲ್ಲಿ ಸರಕಾರ ದಿಟ್ಟ ಹೆಜ್ಜೆ ಇಡುವ ಮೂಲಕ ಯಾವುದೇ ಬಂಡವಾಳಶಾಹಿಗಳ ಒತ್ತಡಕ್ಕೆ ಮಣಿಯಬಾರದು ಎಂದು ಮನವಿ ಸಲ್ಲಿಸಲಾಯಿತು.