ಶಿವಮೊಗ್ಗ: ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಪ್ರಸಿದ್ಧ ಪ್ರವಾಸಿ ಸ್ಥಳವಾದ ಜೋಗ ಜಲಪಾತದ ವೀಕ್ಷಣೆಗೆ ಅಲ್ಲಿನ ಜಿಲ್ಲಾಡಳಿತ ನಿರ್ಭಂದ ವಿಧಿಸಿತ್ತು. ಆದರೆ ಜನವರಿ 1 ರಿಂದ ಮಾರ್ಚ್ 15 ರವರೆಗೆ (ಸಂಕ್ರಾಂತಿ ವರೆಗೆ) ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಹೊಸ ವರ್ಷಾಚರಣೆ ಹಾಗೂ ಸಂಕ್ರಾಂತಿ ಪ್ರಯುಕ್ತ ಶಿವಮೊಗ್ಗ ಜಿಲ್ಲಾಡಳಿತ ತೆರವುಗೊಳಿಸಿದೆ.
ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯದ್ವಾರ ಹೊರತುಪಡಿಸಿ ವ್ಯೂ ಪಾಯಿಂಟ್, ಯಾತ್ರಿ ನಿವಾಸ, ರಾಣಿ ಫಾಲ್ಸ್, ಮುಂಬೈ ಬಂಗಲೆಯಿಂದ ಪ್ರವಾಸಿಗರು ಜಲಪಾತ ವೀಕ್ಷಿಸಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ. ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿತ್ತು.