Home » News » SSLC ಫಲಿತಾಂಶ ಒಂದಕಿ ಸ್ಥಾನವನ್ನಾಗಿಸಲು ಎಲ್ಲರೂ ಪ್ರಾಮಾಣಿಕವಾಗಿ ಶ್ರಮವಹಿಸಿ:ಹೆಚ್.ಕೆ.ಪಾಟೀಲ

SSLC ಫಲಿತಾಂಶ ಒಂದಕಿ ಸ್ಥಾನವನ್ನಾಗಿಸಲು ಎಲ್ಲರೂ ಪ್ರಾಮಾಣಿಕವಾಗಿ ಶ್ರಮವಹಿಸಿ:ಹೆಚ್.ಕೆ.ಪಾಟೀಲ

by CityXPress
0 comments

ಗದಗ: ಶೈಕ್ಷಣಿಕ ಸುಧಾರಣೆಯ ಕಾರ್ಯಕ್ರಮದ ಮೂಲಕ ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಒಂದಕಿ ಸ್ಥಾನವನ್ನಾಗಿಸಲು ಎಲ್ಲರೂ ಪ್ರಾಮಾಣಿಕವಾಗಿ ಶ್ರಮವಹಿಸಬೇಕೆಂದು ಕಾನೂನು ಹಾಗೂ ಪ್ರವಾಸೋದ್ಯಮ ಸಚಿವ ಡಾ.ಎಚ್.ಕೆ.ಪಾಟೀಲ ತಿಳಿಸಿದರು.

ಗದಗ ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಜರುಗಿದ ಗದಗ ಜಿಲ್ಲಾ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ಕುರಿತು ಕಾರ್ಯಾಗಾರ ಹಾಗೂ ಶೈಕ್ಷಣಿಕ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಕಡಿಮೆ ಬಂದಾಗ ಮುಜುಗರಕ್ಕೆ ಈಡಾಗುವ ಸಂದರ್ಭ ಬರುತ್ತದೆ, ನಮ್ಮ ಶಿಕ್ಷಣದ ಕುರಿತು ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಶಿಕ್ಷಕರು ಪ್ರಾಮಾಣಿಕವಾಗಿ ಹಾಗೂ ಗಂಭೀರವಾಗಿ ಕೆಲಸ ಮಾಡುತ್ತಿದ್ದಾರೆ, ಶಿಕ್ಷಕರ ಕಾರ್ಯಕ್ರಮದ ಪಟ್ಟಿ ಗಮನಿಸಿದರೆ ಎಲ್ಲಾ ಶಿಕ್ಷಕರು ಸಮಯ ಮೀರಿ ಕೆಲಸ ಮಾಡುತ್ತಿದ್ದಾರೆ, ಶಾಲೆಗಳನ್ನು ಅಧಿಕಾರಿಗಳಿಗೆ ದತ್ತು ನೀಡಲಾಗಿದೆ, ಅಧಿಕಾರಿಗಳು ಮಾರ್ಗದರ್ಶನ ನೀಡಿ ಶಿಕ್ಷಣದ ಗುಣಮಟ್ಟವನ್ನು ಸುಧಾರಣೆ ಮಾಡಬೇಕು, ತಾಲೂಕವಾರು ವಿಷಯವಾರು ಸಭೆ ಸಂಘಟನೆ ಮಾಡಿ ಕಾರ್ಯಗಾರವನ್ನು ಏರ್ಪಡಿಸಲಾಗಿದೆ ಎಂದರು.

ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಮಾತನಾಡಿ ಕಲಿಯುವ ಅವಶ್ಯಕತೆ ಇರುವ ಮಕ್ಕಳು ಖಂಡಿತವಾಗಿ ಶಾಲೆಗೆ ತಪ್ಪದೇ ಬರುತ್ತಾರೆ. ಶಿಕ್ಷಕರು ಆಸಕ್ತಿಯಿಂದ ಪಾಠ ಮಾಡಲು ಅನುಕೂಲಕರ ವಾತಾವರಣ ನಿರ್ಮಿಸಬೇಕು. ಶೈಕ್ಷಣಿಕ ಕ್ಷೇತ್ರದಲ್ಲಿ ಮೂಲ ಸಮಸ್ಯೆಗಳನ್ನು ಕಂಡು ಹಿಡಿದು ಅದಕ್ಕೆ ಪರಿಹಾರ ಕಂಡುಕೊಳ್ಳಬೇಕು, ಶಿಕ್ಷಕರು ಮಾನಸಿಕವಾಗಿ ನೆಮ್ಮದಿಯಿಂದ ಇದ್ದಾಗ ಮಾತ್ರ ಉತ್ತಮ ಪಾಠ ಬೋದನೆ ಆಗುತ್ತದೆ, ಕನಿಷ್ಟ ಒಂದು ತರಗತಿಗೆ ಒಬ್ಬ ಶಿಕ್ಷಕರನ್ನು ನೇಮಕ ಮಾಡುವುದರ ಜೊತೆಗೆ ಆ ಶಾಲೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕೆಲಸ ಇನ್ನಷ್ಟು ಆಗಲಿ. ಮಕ್ಕಳು ಹಿರಿಯರಿಗೆ ಗೌರವ ನೀಡುವಂತಹ ಸಂಸ್ಕಾರಯುತ ಶಿಕ್ಷಣವನ್ನು ಪಡೆಯುವಂತಾಗಬೇಕು ಎಂದರು. ವಿಧಾನ ಪರಿಷತ್ ಶಾಸಕರಾದ ಎಸ್ ವಿ ಸಂಕನೂರು ಮಾತನಾಡಿದರು.

banner

ತೋಂಟದಾರ್ಯ ಸಂಸ್ಥಾನಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ವಿದ್ಯಾಪೀಠದ ಕಾರ್ಯದರ್ಶಿ ಶಿವಾನಂದ ಎಸ್ ಪಟ್ಟಣಶೆಟ್ಟರ ಕಾರ್ಯಾಗಾರದ ಕುರಿತು ಮಾತನಾಡಿದರು.ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಕನಕದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿ ದಂಡಿನ, ವಿದ್ಯಾದಾನ ಶಿಕ್ಷಣ ಸಮಿತಿ ಅಧ್ಯಕ್ಷರಾದ ಧೀರೇಂದ್ರ ಹುಯಿಲಗೋಳ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಆರ್.ಭಟ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ( ಅಬಿವೃದ್ಧಿ) ಜಿ.ಎಲ್. ಬಾರಾಟಕ್ಕೆ, ಡಾ ಶರಣು ಗೋಗೇರಿ, ವಿವಿಧ ಕ್ಷೇತ್ರ ಶಿಕ್ಷಣಾಧಿಕಾರಿಗಳು, ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ಜಿಲ್ಲಾ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳು, ಶಿಕ್ಷಕರು ಹಾಜರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb