Sunday, April 20, 2025
Homeರಾಜ್ಯದ್ವಿತೀಯ PUC ಹಾಗೂ SSLC ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ದ್ವಿತೀಯ PUC ಹಾಗೂ SSLC ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: SSLC ಹಾಗೂ ದ್ವಿತೀಯ PUC ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ಈಗಾಗಲೇ ಈ ಹಿಂದೆ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿ, ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಇಲಾಖೆ ಸೂಚಿಸಿದೆ.

*SSLC ಪರೀಕ್ಷೆ ವೇಳಾಪಟ್ಟಿ ಹೀಗಿದೆ*

ಮಾರ್ಚ್ 21- ಪ್ರಥಮ ಭಾಷೆ ಕನ್ನಡ

ಮಾರ್ಚ್ 24- ಗಣಿತ

ಮಾರ್ಚ್ 26- ದ್ವಿತೀಯ ಭಾಷೆ

ಮಾರ್ಚ್ 29- ಸಮಾಜ ವಿಜ್ಞಾನ

ಏಪ್ರಿಲ್ 2- ವಿಜ್ಞಾನ

ಏಪ್ರಿಲ್ 4- ತೃತೀಯ ಭಾಷೆ

ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಮೇಲಿನಂತೆ ಪರೀಕ್ಷೆಗಳು ನಡೆಯಲಿವೆ.

*ದ್ವಿತೀಯ PUC ಪರೀಕ್ಷೆಗೆ ಅಂತಿಮ ವೇಳಾಪಟ್ಟಿ ಪ್ರಕಟ*

ಮಾ.1- ಕನ್ನಡ, ಅರೇಬಿಕ್.

ಮಾ.3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ.

ಮಾ.4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.

ಮಾ.5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.

ಮಾ.7- ಇತಿಹಾಸ, ಭೌತಶಾಸ್ತ್ರ

ಮಾ.10- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ

ಮಾರ್ಚ್ 13- ಅರ್ಥಶಾಸ್ತ್ರ

ಮಾರ್ಚ್ 15- ಇಂಗ್ಲಿಷ್

ಮಾರ್ಚ್ 17- ಭೂಗೋಳಶಾಸ್ತ್ರ

ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ,ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.

ಮಾರ್ಚ್ 19-ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್‌, ಆಟೋಮೊಬೈಲ್‌, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್‌

ಮಾ.20-ಹಿಂದಿ

ಈ ಪ್ರಕಾರ ದ್ವಿತೀಯ PUC ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಗೊಂಡಿದ್ದು, ಮಾರ್ಚ್ 1 ರಿಂದ, ಮಾ 20ರ ವರೆಗೆ ಪರೀಕ್ಷೆಗಳು ನಡೆಯಲಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments