ಗದಗ:ಬಿ.ಎಸ್.ಯಡಿಯೂರಪ್ಪ ಆಪ್ತರೆಂದೇ ಗುರುತಿಸಿಕೊಂಡಿದ್ದ ಗದಗ ಜಿಲ್ಲೆಯ ಬಿಜೆಪಿ ಪಕ್ಷದ ಪ್ರಥಮ ಜಿಲ್ಲಾಧ್ಯಕ್ಷ ಹಾಗೂ ದ್ರಾಕ್ಷಾರಸ ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ಶ್ರೀ ಕಾಂತಿಲಾಲ್ ಬನ್ಸಾಲಿ (66) ಇವರು ಇಂದು (ಡಿ.14) ರ ಶನಿವಾರ 2.30 ರ ಸುಮಾರಿಗೆ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಬಿಜೆಪಿ ಪಕ್ಷದಲ್ಲಿ ಹಿರಿಯರು ಹಾಗೂ ಅನುಭವಿ ಸ್ಥಾನ ಪಡೆದಿದ್ದ ಬನ್ಸಾಲಿ ಅಪಾರ ಕಾರ್ಯಕರ್ತರನ್ನ ಪಕ್ಷಕ್ಕೆ ಬರಮಾಡಿಕೊಳ್ಳುವದರಲ್ಲಿ ಯಶಸ್ವಿಯಾಗಿದ್ದರು. ಅಲ್ಲದೇ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯರಾಗಿ, ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಮತ್ತು ಜಿಲ್ಲಾ ಕೋರ್ ಕಮೀಟಿ ಸದಸ್ಯರಾಗಿ ಪಕ್ಷದಲ್ಲಿ ಸಕ್ರೀಯವಾಗಿ ತಮ್ಮದೇ ಆದ ಸೇವೆ ಸಲ್ಲಿಸಿದ್ದರು.ಗದಗ ಜಿಲ್ಲೆಯಾದ ತಕ್ಷಣ ಬಿಜೆಪಿ ಪಕ್ಷದ ಪ್ರಥಮ ಜಿಲ್ಲಾಧ್ಯಕ್ಷರಾಗಿ ಎರೆಡು ಅವಧಿಗೆ ಸೇವೆ ಸಲ್ಲಿಸಿದ್ದರು.
ಜೊತೆಗೆ ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ತಮ್ಮದೇ ಆದ ಕೊಡುಗೆ ಸಲ್ಲಿಸಿದ್ದರು.
ಬನ್ಸಾಲಿ ಅವರ ನಿಧನಕ್ಕೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ಅಪಾರ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.