21
ಗದಗ: ನಾಡು ಕಂಡ ಅಪರೂಪದ ರಾಜಕಾರಣಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ.
ಬೆಂಗಳೂರಿನ ಸದಾಶಿವ ನಗರದಲ್ಲಿನ ಅವರ ನಿವಾಸದಲ್ಲಿ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಹಿರಿಯ ರಾಜಕಾರಣಿ ಜಿ.ಎಸ್.ಗಡ್ಡದ್ದೇವರಮಠ ಅವರು ಸದಾಶಿವ ನಗರದ ನಿವಾಸಕ್ಕೆ ತೆರಳಿ ಎಸ್.ಎಂ.ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನವನ್ನ ಮಾಡಿದ್ದಾರೆ.
ಎಸ್.ಎಂ.ಕೃಷ್ಣ ಅಗಲಿಕೆ ರಾಜ್ಯ ಹಾಗೂ ದೇಶಕ್ಕೆ ತುಂಬಲಾರದ ನಷ್ಟವಾಗಿದ್ದು, ರಾಜಕೀಯ ಕ್ಷೇತ್ರ ಅಜಾತಶತ್ರು ವ್ಯಕ್ತಿತ್ವವನ್ನ ನಾವೆಲ್ಲ ಕಳೆದುಕೊಂಡಿದ್ದೇವೆ ಎಂದು ಸಂತಾಪ ಸೂಚಿಸಿದ್ದಾರೆ.