ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಇಂದು ಸಂಜೆ 8 ಗಂಟೆಯ ಸುಮಾರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮನಮೋಹನ್ ಸಿಂಗ್ ಅವರಿಗೆ 92 ವರ್ಷ ವಯಸ್ಸಾಗಿದ್ದು, ಅವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಚಿಕಿತ್ಸೆ ಫಲಿಸದೇ 9.30ರ ಸಮಯದಲ್ಲಿ ವಿಧಿವಶರಾಗಿದ್ದಾರೆ.
2004 ರಿಂದ 2014ರವರೆಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಮನಮೋಹನ್ ಸಿಂಗ್ ಅವರು ಈ ವರ್ಷದ ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು.
1991ರಲ್ಲಿ ರಾಜಕೀಯ ಪ್ರವೇಶಿಸಿದ ಮನಮೋಹನ್ ಸಿಂಗ್ ಅವರು ಪಿವಿ ನರಸಿಂಹ ರಾವ್ ಅವರ ಸಚಿವ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು.