ಗದಗ: ಬೀಸುವ ಕಲ್ಲನ್ನ ಎತ್ತಿಹಾಕಿ ತನ್ನ ಹಂಡತಿಯನ್ನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ.
ಯಲ್ಲಮ್ಮ ಅಲಿಯಾಸ್ ಸ್ವಾತಿ (35) ಎನ್ನುವ ಮಹಿಳೆಯನ್ನ, ಪತಿ ರಮೇಶ್ ನರಗುಂದ ಅನ್ನುವಾತ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಇಂದು (ಸೆ.8) ಮಧ್ಯಾಹ್ನ ಮನೆಯಲ್ಲಿ ಈ ಭೀಕರ ಘಟನೆ ನಡೆದಿದ್ದು, ಮೊದಲು ಮನೆಯಲ್ಲಿದ್ದ ಬೀಸುವ ಕಲ್ಲಿನಿಂದ ಹೆಂಡತಿ ತಲೆಮೇಲೆ ಎತ್ತಿ ಹಾಕಿ, ನಂತರ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಪತ್ನಿಯ ಮೇಲಿನ ಸಂಶಯವೇ ಈ ಕೊಲೆಗೆ ಕಾರಣವಿರಬಹುದು ಎನ್ನಲಾಗಿದೆ. ಈಗಾಗಲೇ ರಮೇಶ ಹಾಗೂ ಸ್ವಾತಿಗೆ ಮೂವರು ಮಕ್ಕಳಿದ್ದು, ಪತಿ ರಮೇಶ ನರಗುಂದ ಗದಗ ಸಾರಿಗೆ ಸಂಸ್ಥೆಯಲ್ಲಿ ಕಂಡಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾನೆ. ಇದೀಗ ತಾಯಿ ಕಳೆದುಕೊಂಡು ಮಕ್ಕಳು ಅನಾಥವಾಗಿವೆ.
ಸ್ಥಳಕ್ಕೆ ಗದಗ ಎಸ್ಪಿ ರೋಹನ್ ಜಗದೀಶ್ ಹಾಗೂ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.