ಗದಗ: ಗದಗ ನಗರದ ಕೆ ಎಚ್ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಗದಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಜರುಗಿತು.
ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಬಸವರಾಜ ಅವರು ಪಾರಿವಾಳಗಳನ್ನ ಹಾರಿಸುವದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಂತರ ಕ್ರೀಡಾಜ್ಯೋತಿ ಬೆಳಗಿ ಪೊಲೀಸ್ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು ಸಧೃಡವಾದ ಆರೋಗ್ಯ ಇದ್ದರೆ ಸಧೃಡ ಮನಸ್ಸು ಇರುತ್ತದೆ. ಸದಾ ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಗಳಿಗೆ ಕ್ರೀಡೆ ಅತ್ಯಂತ ಅವಶ್ಯವಾಗಿದೆ ಎಂದರು.
ಸ್ವಾಸ್ಥ್ಯ ಸಮಾಜಕ್ಕಾಗಿ ಹಗಲಿರುಳೆನ್ನದೇ ಪ್ರತಿನಿತ್ಯ ತಮ್ಮ ಕರ್ತವ್ಯದಲ್ಲಿ ಬ್ಯುಸಿಯಾಗಿದ್ದ ಪೊಲೀಸ್ ಸಿಬ್ಬಂದಿಗಳು ಅತ್ಯಂತ ಕ್ರಿಯಾಶೀಲರಾಗಿ ಕ್ರೀಡಾಕೂಟದಲ್ಲಿ ಪಾಲ್ಗೊಂಡರು.
ಹೆಚ್ಚುವರಿ ಪೊಲಿಸ್ ವರಿಷ್ಠಾಧಿಕಾರಿ ಎಸ್ ಬಿ ಸಂಕದ, ನರಗುಂದ ಡಿವಾಯ್ಎಸ್ಪಿ ಪ್ರಭುಗೌಡ ಪಾಟೀಲ್, ಸಿಇಎನ್ ಡಿವಾಯ್ಎಸ್ಪಿ ಮಹಾಂತೇಶ ಸಜ್ಜನ್, ಡಿಎಆರ್ ಡಿಎಸ್ಪಿ ವಿದ್ಯಾನಂದ ನಾಯಕ ಸೇರಿದಂತೆ ಜಿಲ್ಲೆಯ ಎಲ್ಲ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ರು.