ಗದಗ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 26-12-1924 ರಂದು ಬೆಳಗಾವಿಯಲ್ಲಿ ನಡೆದ ಐತಿಹಾಸಿಕ ಎಐಸಿಸಿ ಅಧಿವೇಶನಕ್ಕೆ ಕರ್ನಾಟಕದ ಇತಿಹಾಸದಲ್ಲಿ ಒಂದು ವಿಶೇಷ ಸ್ಥಾನವಿದ್ದು, ಬೆಳಗಾವಿ ಅಧಿವೇಶನ ಶತಮಾನೋತ್ಸವದ ಅಂಗವಾಗಿ ಜನವರಿ 21ರಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ವತಿಯಿಂದ “ಗಾಂಧಿ ಭಾರತ” ಸ್ಮರಣಾರ್ಥ “ಜೈ ಬಾಪು”, ಜೈ ಭೀಮ್” ಮತ್ತು “ಜೈ ಸಂವಿಧಾನ” ಅಭಿಯಾನ ಹಾಗೂ “ಬೃಹತ್ ಕಾಂಗ್ರೆಸ್ ಸಮಾವೇಶ” ಹಮ್ಮಿಕೊಳ್ಳಲಾಗಿದ್ದು ಜಿಲ್ಲೆಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಬೇಕು ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಗದಗ ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ ಮನವಿ ಮಾಡಿದ್ದಾರೆ.

ಜನವರಿ 21 ರ ಮಂಗಳವಾರದಂದು ಬೆಳಿಗ್ಗೆ ಬೆಳಗಾವಿಯ ಸುವರ್ಣಸೌಧದಲ್ಲಿ ಸರ್ಕಾರ ವತಿಯಿಂದ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಂತರ ಬೆಳಗಾವಿ ನಗರದ ಕ್ಲಬ್ ರಸ್ತೆಯ ಸಿ.ಪಿ.ಎಡ್. ವೈದಾನದಲ್ಲಿ “ಗಾಂಧಿ ಭಾರತ” ಸ್ಮರಣಾರ್ಥ “ಜೈ ಬಾಪು”, ಜೈ ಭೀಮ್” ಮತ್ತು “ಜೈ ಸಂವಿಧಾನ” ಅಭಿಯಾನಗಳನ್ನು ಮುಂದುವರೆಸುವ ಸಲುವಾಗಿ “ಬೃಹತ್ ಕಾಂಗ್ರೆಸ್ ಸಮಾವೇಶ” ಜರುಗಲಿದ್ದು, ಈ ಸಮಾವೇಶವನ್ನು ಅರ್ಥಪೂರ್ಣಗೊಳಿಸಲು ಜಿಲ್ಲೆಯಾದ್ಯಂತ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಇದರಲ್ಲಿ ಭಾಗವಹಿಸಬೇಕಾದ ಅವಶ್ಯಕತೆ ಇರುತ್ತದೆ.
ಆದ್ದರಿಂದ ಕಾಂಗ್ರೆಸ್ ಪಕ್ಷದ ಜಿಲ್ಲಾ ಪದಾಧಿಕಾರಿಗಳು ಬ್ಲಾಕ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕ ಪಂಚಾಯತ, ಗ್ರಾಮ ಪಂಚಾಯತ, ಎಪಿಎಂಸಿ ಪಕ್ಷದ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಗೂ ನಗರಸಭೆ ಪಟ್ಟಣ ಪಂಚಾಯ್ತಿ ಪುರಸಭೆ ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಮಹಿಳಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎಸ್‌ಸಿ/ಎಸ್‌ಟಿ, ಅಲ್ಪಸಂಖ್ಯಾತರ, ವಿದ್ಯಾರ್ಥಿ ಕಾಂಗ್ರೆಸ್, ಕಾಂಗ್ರೆಸ್ ಸೇವಾದಳ, ಹಿಂದುಳಿದ ವರ್ಗ, ಸಾಮಾಜಿಕ ಜಾಲತಾಣ, ರಾಜೀವಗಾಂಧಿ ಪಂಚಾಯತ ಸಂಘಟನೆ, ಮಾಜಿ ಸೈನಿಕರ ವಿಭಾಗ, ಮೀನುಗಾರ ವಿಭಾಗ, ಕಾರ್ಮಿಕರ ವಿಭಾಗ, ಐ,ಎನ್,ಟಿ,ಯು,ಸಿ, ಕಾನೂನು ಮತ್ತು ಮಾನವ ಹಕ್ಕು ವಿಭಾಗ, ಕಿಸಾನ್ ಮತ್ತು ಖೆತ್ ಮಜದೂರ ವಿಭಾಗ, ಮಾಜಿ ಸೈನಿಕರ ವಿಭಾಗ, ವೈದ್ಯರ ವಿಭಾಗ, ವೃತ್ತಿಪರ ವಿಭಾಗ, ಪದವಿಧರ ಹಾಗೂ ಶಿಕ್ಷಕರ ವಿಭಾಗ, ನೀತಿ ಮತ್ತು ಸಂಶೋಧನೆ ತರಬೇತಿ ವಿಭಾಗ, ವಿಕಲಚೇತನರ ವಿಭಾಗ, ಲಿಗಲ್ ರೀಪಾರ್ಮ್ಸ್ ವಿಭಾಗ, ಐ,ಟಿ, ಮತ್ತು ಡಾಟಾ ವಿಭಾಗ, ಮಾಧ್ಯಮ ಮತ್ತು ಸಂಪರ್ಕ ಇಲಾಖೆ ವಿಭಾಗ, ಅಧ್ಯಕ್ಷರುಗಳು ಹಾಗೂ ಸದಸ್ಯರುಗಳು, ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ ಮಂದಾಲಿ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.