ಗದಗ: ಗಜೇಂದ್ರಗಡ ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆಗೆ ಕಾರಣನಾಗಿರುವ ದುಷ್ಕರ್ಮಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕೆಂದು, ಗದಗ ಜಿಲ್ಲಾ ಕ್ರಾಂತಿ ಸೇನಾ ಸಂಘಟನೆ ವತಿಯಿಂದ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪ್ರತಿಭಟನೆ ಮೂಲಕ ಮನವಿ ಸಲ್ಲಿಸಲಾಯಿತು.
ಈ ವೇಳೆ ಸಂಘಟನೆ ಜಿಲ್ಲಾಧ್ಯಕ್ಷ ಬಾಬು ಬಾಕಳೆ ಮಾತನಾಡಿ, ಬಾಲಕಿಗೆ ಪ್ರೀತಿ ಮಾಡು ಅಂತ ಕಿರುಕುಳ ನೀಡಿದ್ದಾರೆ. ಇದರಿಂದ ಅವಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೀಗಾಗಿ ಅವಳ ಸಾವಿಗೆ ಕಾರಣರಾದ ದುಷ್ಟರಿಗೆ ಜೀವಾವಧಿ ಶಿಕ್ಷೆ ನೀಡಬೇಕು ಹಾಗೂ ರಾಜ್ಯದಲ್ಲಿ ಹಿಂದೂ ಸಮಾಜದ ಯುವತಿಯರ ಮೇಲೆ ಸಾಕಷ್ಟು ಲವ್ ಜಿಹಾದ್ ಪ್ರಕರಣಗಳು ನಡೆಯುತ್ತಿವೆ.ಇದರ ವಿರುದ್ಧ ಪೋಲಿಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ರಾಜರಾಜೇಶ್ವರಿ ಮಹಿಳಾ ಮಂಡಳದ ಅಧ್ಯಕ್ಷೆ ರೇಣುಕಾ ಕಬಾಡಿ, ಕ್ರಾಂತಿ ಸೇನಾ ಗದಗ ಜಿಲ್ಲಾ ಸಂಘಟನೆ ಮಹಿಳಾ ಅಧ್ಯಕ್ಷೆ, ಶ್ರೀಮತಿ ರಾಣಿ ಚಂದಾವರ, ಬಿಜೆಪಿ ಮುಖಂಡರಾದ ಸುಧೀರ್ ಕಾಟೀಗರ, ಸಮಾಜದ ಹಿರಿಯರಾದ ರವಿ ಶಿದ್ಲಿಂಗ್, ಪ್ರವೀಣ್ ಭೀಮಾ ಕಟೀಗಾರ್, ಹಬೀಬ, ಭರತ, ನಾರಾಯಣ ಸೇರಿದಂತೆ ಅನೇಕರು ಭಾಗವಹಿಸಿದ್ದರು.