ಆನೆಕಲ್: ಶಾಲೆಗೆ ಹೋಗು ಅಂತಾ ಪೋಷಕರು ಒತ್ತಾಯ ಮಾಡಿದ್ದಕ್ಕೆ ಮನನೊಂದ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಬಾಲಕಿ ತಾಯಿ ಹಾರಗದ್ದೆ ಗ್ರಾಮದಲ್ಲಿ ಅಂಗಡಿ ಇಟ್ಟು ಕೊಂಡಿದ್ರು. ತಂದೆ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಬಾಲಕಿ ನೇಣಿಗೆ ಶರಣಾಗಿದ್ದಾಳೆ. ತಾಯಿ ಮನೆಗೆ ಬಂದು ನೋಡಿದಾಗ ಮಗಳು ಮನೆಯ ಕೊಠಡಿಯಲ್ಲಿದ್ದ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವದು ಬೆಳಕಿಗೆ ಬಂದಿದೆ.

ಬಾಲಕಿ ಈ ವರ್ಷ 9 ನೇ ತರಗತಿ ಮುಗಿಸಿ ಶಾಲೆಗೆ ಹೋಗಿರಲಿಲ್ಲ. ಹೀಗಾಗಿ ಶಾಲೆಗೆ ಹೋಗು ಎಂದು ಬಾಲಕಿ ತಂದೆ ತಾಯಿ ಪದೇ ಪದೇ ಹೇಳುತ್ತಿದ್ದರು. ಇದೇ ವಿಚಾರಕ್ಕೆ ತಂದೆ ತಾಯಿ ಹಾಗೂ ಮಗಳ ನಡುವೆ ಆಗಾಗ ಗಲಾಟೆ ಆಗುತ್ತಿತ್ತು.
ನನ್ನ ತಲೆಗೆ ಓದು ಹತ್ತುತ್ತಿಲ್ಲ ನಾನು ಶಾಲೆಗೆ ಹೋಗುವುದಿಲ್ಲ ಎಂದು ಬಾಲಕಿ ಹಠ ಹಿಡಿಯುತ್ತಿದ್ದಳು. ಇದೇ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.