ಲಕ್ಷ್ಮೇಶ್ವರ: ವಿದ್ಯಾರ್ಥಿಗಳಿಗೆ ವಿದ್ಯಾವೇತನ ಮತ್ತು ಸಮರ್ಪಕ ಬಸ್ ಸೌಲಭ್ಯ ಒದಗಿಸುವಂತೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಎಬಿವಿಪಿ ಸಂಘಟನೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಲಕ್ಷ್ಮೇಶ್ವರ ಸುದ್ದಿ:ಪರಮೇಶ ಲಮಾಣಿ
ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಾಲೂಕಿನ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇನ್ನು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರಿಂದ ಕೆಲ ಸಮಯ ವಾಹನದಟ್ಟಣೆ ಆಯಿತು.
ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಒಂದು ದೇಶ ಹಾಗೂ ರಾಜ್ಯ ಅಭಿವೃದ್ಧಿಯಾಗಬೇಕೆಂದರೆ ಅಲ್ಲಿನ ಶಿಕ್ಷಣ ವ್ಯವಸ್ಥೆ ಚೆನ್ನಾಗಿರಬೇಕು. ಅಲ್ಲದೆ, ಶಿಕ್ಷಣ ವ್ಯವಸ್ಥೆಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.
ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಕಾರಣಕ್ಕೆ ಸರಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ, ಅವುಗಳ ಸಮರ್ಪಕ ಅನುಷ್ಠಾನವಾಗದ ಕಾರಣ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.
ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪಟ್ಟಣದ ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ನಂತರ ತಹಶಿಲ್ದಾರ ಧನಂಜಯ ರವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಗರ ಕಾರ್ಯದರ್ಶಿ ಹಾಗೂ ರಾಜ್ಯಕಾರ್ಯಕಾರಿಣಿ ಅಭಿಷೇಕ್ ಉಮಚಗಿ, ತಾಲೂಕು ಸಂಚಾಲಕ, ಪ್ರಕಾಶ್ ಕುಂಬಾರ್, ವಿನಯ್ ಸಪಡ್ಲ, ಯಶ್ವಂತ್ ಶಿರಹಟ್ಟಿ, ಮನೋಜ್ ತಂಡಗೆರ, ವಿನಾಯಕ ಕುಂಬಾರ, ಅಭಿಷೇಕ್ ಇಸನಗೌಡರ್,
ವಿನಾಯಕ ಹುಂಬಿ, ಅರವಿಂದ ಇಚಾಂಗಿ,
ಯುವರಾಜ್ ದುರ್ಗದ, ಈರಣ್ಣ ಕುಂಬಾರ ಸೇರಿದಂತೆ ಇತರರಿದ್ದರು.