ಈಗಾಗಲೇ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಮಹಿಳೆಯರಿಗೆ ವಿಶೇಷ ಪ್ರಾಬಲ್ಯ ನೀಡಿದೆ. ಅದರಲ್ಲೂ ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ಮಹಿಳೆಗೆ ಪ್ರತಿ ತಿಂಗಳು ಎರೆಡು ಸಾವಿರ ರೂ. ನೀಡುತ್ತಿದ್ದು, ಇದೇ ಯೋಜನೆಯನ್ನು ಮತ್ತಷ್ಟು ವ್ಯಾಪಿಸಲು ಹೊರಟಿದೆ. ಈ ಕುರಿತು ಹಿರೇ ಬಾಗೇವಾಡಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಮಾತನಾಡಿರೋ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಗಲಿದ್ದು,ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ಹೊಂದಿದೆ ಎಂದಿದ್ದಾರೆ. ಮಹಿಳೆ ಕೈ ಒಡ್ಡುವ ಸ್ವಭಾವ ಅವರದಲ್ಲ. ಈ ಸ್ವಭಾವ ಪ್ರತಿಯೊಬ್ಬ ಮಹಿಳೆಯರಲ್ಲಿರುತ್ತದೆ ಎಂದು ಹೇಳಿದ್ದಾರೆ.