9
ಕರ್ನಾಟಕದಲ್ಲಿ 1ರಿಂದ 5ನೇ ತರಗತಿವರೆಗೆ ಓದುತ್ತಿರುವ 22 ಲಕ್ಷ ವಿದ್ಯಾರ್ಥಿಗಳಿದ್ದು, ಅವರಿಗೆ ವಿಜ್ಞಾನ ಮತ್ತು ಗಣಿತ ಬೋಧಿಸಲು ಕೇವಲ 8,895 ಶಿಕ್ಷಕರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ. 81,979 ಪ್ರಾಥಮಿಕ ಶಾಲಾ ಶಿಕ್ಷಕರಿದ್ದಾರೆ, ಇವರಲ್ಲಿ 5,732 ಇಂಗ್ಲಿಷ್ ಶಿಕ್ಷಕರಿದ್ದಾರೆ ಎಂದು ವರದಿ ಹೇಳಿದೆ. ಹಲವು ಜಿಲ್ಲೆಗಳ SSLC ಫಲಿತಾಂಶ ಕಳಪೆಯಾಗಿರಲು ಇದೂ ಒಂದು ಕಾರಣವಾಗಿದ್ದು, ಸರ್ಕಾರಿ ಶಾಲೆಗಳು ಮುಚ್ಚುವ ಪರಿಸ್ಥಿತಿ ಎದುರಾಗಿದೆ ಎಂದು ಶಿಕ್ಷಣ ತಜ್ಞ ವಾಸುದೇವ ಶರ್ಮಾ ಹೇಳಿದ್ದಾರೆ.