ಮುಂಡರಗಿ: ರಸ್ತೆ ಬದಿ ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರು ಗದಗ ಜಿಲ್ಲೆ ಮುಂಡರಗಿ ಪಟ್ಟಣದ, ವಾಸವಿ ಪ್ರಿಂಟಿಂಗ್ ಪ್ರೆಸ್ ಹಾಗೂ ಜನರಲ್ ಸ್ಟೋರ್ ನ ಗುರುರಾಜು ಅಬ್ಬಿಗೇರಿ(35), ಪುತ್ರ ರಿಷಾಂಕ್ ಅಬ್ಬಿಗೇರಿ (2) ಎನ್ನಲಾಗಿದೆ. ಇನ್ನು ಪತ್ನಿ ಹರ್ಷಿತಾ ಸ್ಥಿತಿ ಗಂಭೀರವಾಗಿದ್ದು, ಗಾಯಾಳುವನ್ನ ಶಿರಾ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ.
ಇಂದು ಬೆಳಗ್ಗೆ 6.30ರ ಸುಮಾರಿನಲ್ಲಿ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಮುಂಡರಗಿ ಕಡೆಗೆ ಕ್ವಿಡ್ ಕಾರಿನಲ್ಲಿ ಬರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರಾ ಬಳಿ ಭೀಕರ ಅಪಘಾತ:ಮುಂಡರಗಿಯ ತಂದೆ-ಮಗು ಸಾವು
36