Home » News » ಬಂಜಾರ ಸಮುದಾಯಕ್ಕೆ ಒಳ ಮೀಸಲಾತಿಯಲ್ಲಿ ಅನ್ಯಾಯ : ಆರೋಪ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ.

ಬಂಜಾರ ಸಮುದಾಯಕ್ಕೆ ಒಳ ಮೀಸಲಾತಿಯಲ್ಲಿ ಅನ್ಯಾಯ : ಆರೋಪ, ಚುನಾವಣೆ ಬಹಿಷ್ಕಾರದ ಎಚ್ಚರಿಕೆ.

by CityXPress
0 comments

ಗದಗ: ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕಳೆದ ಹನ್ನೊಂದು ದಿನಗಳಿಂದ ಅಹೋರಾತ್ರಿ ಧರಣಿ ಹಮ್ಮಿಕೊಂಡಿದ್ದ ಬಂಜಾರ ಸಮುದಾಯ ಶುಕ್ರವಾರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವರದಿ: ಪರಮೇಶ ಲಮಾಣಿ.

ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರಾರಂಭವಾದ ಪ್ರತಿಭಟನಾ ಮೇರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ವೇಧಿಕೆ ಕಾರ್ಯಕ್ರಮ ಜರುಗಿತು.

ಮುಂದಿನ ಹೋರಾಟದ ಬಗ್ಗೆ ಗದಗ ಜಿಲ್ಲೆಯ 72 ತಾಂಡಾಗಳ ನಾಯಕರು ಸೇರಿ ಗೋರ ನ್ಯಾಯ ನಸಾಬ ( ನ್ಯಾಯ ಪಂಚಾಯತಿ ) ಮಾಡಿ ಸರ್ಕಾರಕ್ಕೆ ಹದಿನೈದು ದಿನಗಳ ಕಾಲಾವಕಾಶ ನೀಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ತಾಂಡಾಗಳ ನಾಯಕರು ಸರ್ಕಾರ ಈಕೂಡಲೇ ಸಮಾಜಕ್ಕೆ ನ್ಯಾಯ ನೀಡಬೇಕು ಇಲ್ಲವಾದಲ್ಲಿ ರಾಜ್ಯದ ಎಲ್ಲಾ ತಾಂಡಾಗಳಲ್ಲಿ ರಾಜಕೀಯ ನಾಯಕರು ಬರದಂತೆ ನೋಡಿಕೊಳ್ಳುವಂತೆ ಆದೇಶಿಸುತ್ತೆವೆ. ಸಾಮಾಜಿಕ ಜಾಲತಾಣದ ಮೂಲಕ ಸರ್ಕಾರ ವಿರುದ್ಧ ಪ್ರಚಾರ ಮಾಡುತ್ತೆವೆ. ನಮ್ಮ ಮೂಲ ಕುಲಕಸಬು ಪ್ರಾರಂಭಿಸುತ್ತೆವೆ, ಚುನಾವಣೆ ಬಹಿಷ್ಕಾರ ಮಾಡುತ್ತೆವೆ. ಎಂದರಲ್ಲದೇ, ತಾಂಡಾಗಳ ಮೂಲಕ ಹಾದು ಹೋಗುವ ರಾಜ್ಯ, ರಾಷ್ಟ್ರ ಹೆದ್ದಾರಿಗಳನ್ನು ಬಂದ್ ಮಾಡಲಾಗುವುದು ಎಂದು ನಿರ್ಯಹಿಸದ ಕೂಡಲೇ ಪ್ರತಿಭಟನೆಯಲ್ಲಿ ನೇರದಿದ್ದ ಜನರು ಎರಡು ಮೇಲೆ ಎತ್ತಿ ಒಪ್ಪಿಗೆ ಸೂಚಿಸಿದರು.

banner

ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ಪಿ.ರಾಜೀವ ಹಾಗೂ ಮಾಜಿ ಲೋಕಸಭಾ ಸದಸ್ಯ ಉಮೇಶ ಜಾಧವ್ ಒಳ ಮೀಸಲಾತಿಯಲ್ಲಿಬಲಗೈ, ಎಡಗೈ ಸಮುದಾಯಕ್ಕೆ ತಲಾ ಶೇ.6ರಷ್ಟು ಮೀಸಲಾತಿ ನೀಡಲಾಗಿದೆ. ಇನ್ನುಳಿದ 63 ಜಾತಿಗಳಿಗೆ ಕೇವಲ ಶೇ. 5ರಷ್ಟು ಮೀಸಲಾತಿ ನೀಡಲಾಗಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ಸಚಿವ ಸಂಪುಟದಲ್ಲಿ ಜಾರಿಮಾಡಿರುವ ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ಸಂಪೂರ್ಣವಾಗಿ ಅವೈಜ್ಞಾನಿಕವಾಗಿದ್ದು, ಈಗಾಗಲೇ ಸಾಮಾಜಿಕ ಅಸಮಾನತೆ, ಆರ್ಥಿಕ ಹಿಂಜರಿತ, ನಿರುದ್ಯೋಗದಿಂದ ಬಳಲುತ್ತಿರುವ ಬಂಜಾರ, ಭೋವಿ, ಕೊರಚ, ಕೊರಮ ಸಮುದಾಯಗಳಿಗೆ ಮಾರಕ ಪರಿಣಾಮ ಬೀರುತ್ತಿದೆ.

ಜನಸಂಖ್ಯೆಗನುಣವಾಗಿ ಜಾರಿಯಾಗಬೇಕಿದ್ದ ಒಳಮೀಸಲಾತಿಯನ್ನು ಪ್ರಭಾವಿಗಳ ಒತ್ತಡಕ್ಕೆ ಮಣಿದು 63 ಜಾತಿಗಳನ್ನು ಸೇರಿಸಿ ಕೇವಲ ಶೇ.5 ಮೀಸಲಾತಿ ನೀಡಿದ್ದು ಈ ಸಮುದಾಯಗಳಿಗೆ ಮಾಡಿದ ಘೋರ ಅನ್ಯಾಯವಾಗಿದೆ. ರಾಜ್ಯದಲ್ಲಿಬಂಜಾರ ಸಮುದಾಯವು ವಲಸೆ, ಅನಕ್ಷರತೆ, ಬಡತನ ಜತೆಗೆ ಈಗಲೂ ತಾಂಡಾಗಳಲ್ಲಿಮೂಲ ಸೌಕರ್ಯಗಳಿಲ್ಲದೇ ಅತ್ಯಂತ ಹಿಂದುಳಿದಿದೆ. ಈ ಸಮುದಾಯದ ಶೇ.90% ರಷ್ಟು ಜನ ದಿನಗೂಲಿ ನಂಬಿಕೊಂಡೆ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಸಂಪುಟ ಒಪ್ಪಿರುವ ಒಳಮೀಸಲಾತಿಯನ್ನು ಮುಖ್ಯಮಂತ್ರಿಗಳು ಕೂಡಲೇ ವಾಪಸ್‌ ಪಡೆದು ಪುನರ್‌ ಪರಿಶೀಲಿಸಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

ನಂತರ ಮಾತನಾಡಿದ ಮಿಸಲಾತಿ ಸಂರಕ್ಷಣಾ ಸಮಿತಿಯ ರಾಜ್ಯ ಕಾರ್ಯದರ್ಶಿ ರವಿಕಾಂತ ಅಂಗಡಿ, ಶಾಸಕ ಚಂದ್ರು ಲಮಾಣಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಸಮಾರು ಎರಡು ಸಾವಿರದಿಂದ ಮೂರು ಸಾವಿರ ಜನ ಸೇರಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಇಲಾಖೆ ಬಿಗಿ ಬಂದೋಬಸ್ತ ನೀಡಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb