ಬೆಂಗಳೂರು, ಏಪ್ರಿಲ್ 10:
ತುಮಕೂರಿನ ಶಿರಾದಲ್ಲಿ ರಾಜ್ಯದ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವಿಲ್ಲ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು, “ಶಿರಾದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ, ಅದು 2 ನೇ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗೋದಿಲ್ಲ. ಪ್ರಾದೇಶಿಕ ಅಥವಾ ಜಿಲ್ಲಾ ಮಟ್ಟದ ವಿಮಾನ ನಿಲ್ದಾಣವಾಗಲಿದೆ, ಎಂದು ಸ್ಪಷ್ಟಪಡಿಸಿದರು.

ಮೇಲಿನ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಇತ್ತೀಚೆಗೆ ತುಮಕೂರು ಜಿಲ್ಲೆಯ ಶಿರಾ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಒತ್ತಾಯಿಸಿ 35 ಮಂದಿ ಶಾಸಕರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
ರಾಜ್ಯದ ಬೆಳವಣಿಗೆ ದೃಷ್ಟಿಯಿಂದ ವಿಭಿನ್ನ ಜಿಲ್ಲೆಗಳಿಗೂ ವಿಮಾನಯಾನ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಯೊಜನೆ ರೂಪಿಸುತ್ತಿದ್ದು, ಅಗತ್ಯ ಪರಿಗಣನೆಗಳ ಆಧಾರದ ಮೇಲೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.
