ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ಸಂಜೆ ಭಯೋತ್ಪಾದಕ ದಾಳಿ ನಡೆದಿದೆ. ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಮಾಡಲಾಗಿದೆ. ಭಯೋತ್ಪಾದಕರ ಈ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ಪ್ರವಾಸಿಗ ಸೇರಿ ಸುಮಾರು 20 ಪ್ರವಾಸಿಗರ ಸಾವಾಗಿದೆ ಎಂದು ವರದಿಯಾಗಿದೆ. ಗಾಯಗೊಂಡ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೇಲಿನ ಈ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಮೂಲಗಳು ಹೇಳುವಂತೆ ಭಯೋತ್ಪಾದಕರು ಮೊದಲು ಪ್ರವಾಸಿಗರಿಂದ ಹೆಸರುಗಳನ್ನು ಕೇಳಿದರು. ಆಗ ಪ್ರವಾಸಿಗರು ತಮ್ಮ ಹಿಂದೂ ಹೆಸರುಗಳನ್ನು ಹೇಳಿದಾಗ ಪ್ರವಾಸಿಗರ ಮೇಲೆ ಅವರು ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಚುರುಕುಗೊಂಡ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 2-3 ಭಯೋತ್ಪಾದಕರು ಹತರಾಗಿದ್ದಾರೆ ಎನ್ನಲಾಗಿದೆ.

ಕಳೆದ ಕೆಲವು ವರ್ಷಗಳಲ್ಲಿ ಭಯೋತ್ಪಾದಕರು ಪ್ರವಾಸಿಗರನ್ನು ನೇರವಾಗಿ ಗುರಿಯಾಗಿಸಿಕೊಂಡು ದಾಳಿ ನಡೆಸಿರುವುದು ಇದೇ ಮೊದಲು ಎಂಬುದು ಗಮನಾರ್ಹ. ಕಾಡಿನಿಂದ ಬಂದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ನಂತರ ಅಲ್ಲಿ ಅವ್ಯವಸ್ಥೆ ಉಂಟಾಗಿದ್ದು, ಪ್ರವಾಸಿಗರು ತಮ್ಮ ಪ್ರಾಣ ಉಳಿಸಿಕೊಳ್ಳಲು ಎಲ್ಲಂದರಲ್ಲಿ ಓಡಲು ಪ್ರಾರಂಭಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ತಕ್ಷಣ ಭದ್ರತಾ ಪಡೆಗಳು ಆ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ಆರಂಭಿಸಿದರು. ಗುಡ್ಡಗಾಡು ಪ್ರದೇಶಗಳಲ್ಲಿ ಸೇನೆ ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
