Home » News » ಮೆಕ್ಕೆಜೋಳ ಬೆಲೆ ಕುಸಿತ: ಕಂಗಾಲಾದ ರೈತ, ಪ್ರತಿಭಟನೆಗೆ ಮುಂದಾದ ಅನ್ನದಾತರು…

ಮೆಕ್ಕೆಜೋಳ ಬೆಲೆ ಕುಸಿತ: ಕಂಗಾಲಾದ ರೈತ, ಪ್ರತಿಭಟನೆಗೆ ಮುಂದಾದ ಅನ್ನದಾತರು…

by CityXPress
0 comments

ಗದಗ(ಲಕ್ಷ್ಮೇಶ್ವರ) : ರೈತರು ಗೋವಿನಜೋಳವನ್ನು ಕಟಾವು ಮಾಡಿಸಿ ಮಾರಾಟ ಮಾಡಲು ಮುಂದಾದರೆ ಸರ್ಕಾರ ಘೋಷಣೆ ಮಾಡಿರುವ ಬೆಂಬಲ ಬೆಲೆಗಿಂತಲೂ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ಬೆಲೆ ಪಾತಳಕ್ಕೆ ಕುಸಿದಿದೆ. ರೈತರು ಕಂಗಾಲಾಗಿದ್ದಾರೆ. ಇಷ್ಟಾದರೂ ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿನ್ನಲೆಯಲ್ಲಿ ಲಕ್ಷ್ಮೇಶ್ವರ ತಾಲೂಕಾ ಸಮಗ್ರ ರೈತ ಹೋರಾಟ ಸಮಿತಿ ಮತ್ತು ಕೃಷಿಕ ಸಮಾಜ ನವದೆಹಲಿ ರೈತ ಸಂಘಟನೆಗಳು ತಹಶಿಲ್ದಾರ ಮೂಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ವರದಿ : ಪರಮೇಶ ಎಸ್ ಲಮಾಣಿ

ಉದ್ದೇಶಿಸಿ ಮಾತನಾಡಿದ ಉತ್ತರ ಕರ್ನಾಟಕ ಮಹಾಸಭಾ ರಾಜ್ಯಧ್ಯಕ್ಷ ರವಿಕಾಂತ ಅಂಗಡಿ ಹಾಗೂ ರೈತ ಮುಖಂಡ ಮಂಜುನಾಥ ಮಾಗಡಿ ಈ ಭಾಗದ ಪ್ರಮುಖ ಬೆಳೆ ಮೆಕ್ಕೆಜೋಳ ಕಟಾವು ಆಗಿದ್ದು, ಈ ಸಂದರ್ಭದಲ್ಲಿ ಸ್ಥಳೀಯ ದರವು ಕುಸಿದಿದೆ ಇದರಿಂದ ರೈತರು ಕಂಗಾಲಾಗಿದ್ದಾರೆ. ಮೆಕ್ಕೆಜೋಳಕ್ಕೆ ಬರೋಬ್ಬರಿ ₹2400 ಘೋಷಣೆ ಮಾಡಬೇಕು. ಖರೀದಿಯು ಮಾಡುತ್ತಿಲ್ಲ ಇಷ್ಟು ದರಕ್ಕೆ ಮಾರುಕಟ್ಟೆ ಸಿಕ್ಕರೆ ರೈತರ ಸಂತಸಕ್ಕೆ ಪಾರವೇ ಇರುವುದಿಲ್ಲ. ಆದರೆ, ಮಾರುಕಟ್ಟೆಯಲ್ಲಿ ಅವಕ ಹೆಚ್ಚಳವಾಗಿದೆ ಎನ್ನುವ ಕಾರಣ ಮುಂದೆ ಮಾಡಿ, ಮಧ್ಯವರ್ತಿಗಳು ಹಾಗೂ ದಲ್ಲಾಳಿಗಳು ಮೆಕ್ಕೆಜೋಳ ಬೆಲೆ ಪಾತಾಳಕ್ಕೆ ಇಳಿಸಿದ್ದಾರೆ. ಇದರಿಂದ ರೈತರು ಕಂಗೆಟ್ಟು ಹೋಗಿದ್ದಾರೆ.

banner

ಪ್ರತಿ ಎಕರೆಗೆ ಗೋವಿನಜೋಳ ಬೆಳೆಯನ್ನು ಬೆಳೆಯಲು ರೈತ 25 ರಿಂದ 30 ಸಾವಿರ ರೂಪಾಯಿ ಖರ್ಚು ಮಾಡಿದ್ದು ಅತಿಯಾದ ಮಳೆಗೆ ಬೆಳೆಯು ಹಾಳಾಗಿ ಅಲ್ಪ ಸ್ವಲ್ಪ ಬೆಳೆಯನ್ನು ಮಳೆಯ ನಡುವೆ ಕಟಾವು ಮಾಡಿ ಹದವಾಗಿ ಒಣಗಿಸಿ ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ₹1800ಗೆ ಕುಸಿದಿದೆ. ಇಷ್ಟು ದರಕ್ಕೆ ಮಾರಿದರೆ ಮಾಡಿದ ಖರ್ಚು ಸಹ ಬರುವುದಿಲ್ಲ ಎಂದು ರೈತರು ಕಣ್ಣೀರು ಹಾಕುತ್ತಿದ್ದಾರೆ.

ಸರ್ಕಾರದ ನಿರ್ಲಕ್ಷ್ಯ:

ಬೆಂಬಲ ಬೆಲೆ ನಿಯಮದಂತೆ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತಲೂ ಕಡಿಮೆ ದರಕ್ಕೆ ಕುಸಿತವಾದ ತಕ್ಷಣ ಬೆಂಬಲ ಬೆಲೆ ಕೇಂದ್ರ ಪ್ರಾರಂಭವಾಗಬೇಕು. ಆದರೆ, ಮಾರುಕಟ್ಟೆಯಲ್ಲಿ ಮೆಕ್ಕೆಜೋಳ ದರ ಕುಸಿತವಾಗಿದೆ. ಆದರೂ ಇದುವರೆಗೂ ಬೆಂಬಲ ಬೆಲೆ ಕೇಂದ್ರ ತೆರೆಯದೇ ಇರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ರೈತ ಚಂಬಣ್ಣ ಬಾಳಿಕಾಯಿ ಆಕ್ರೋಶ ವ್ಯಕ್ತಪಡಿಸಿದರು.

ಕೃತಕ ಬೆಲೆ ಕುಸಿತ:

ಮೆಕ್ಕೆಜೋಳಕ್ಕೆ ಬೇಡಿಕೆ ಇದೆಯಾದರೂ ಆವಕ ಹೆಚ್ಚಳವಾಗಿದೆ ಎನ್ನುವ ಕಾರಣಕ್ಕಾಗಿಯೇ ದಲ್ಲಾಳಿಗಳು ಮೆಕ್ಕೆಜೋಳ ದರ ಕುಸಿಯುವಂತೆ ಮಾಡಿದ್ದಾರೆ. ಬೇಡಿಕೆ ಇಲ್ಲ ಎಂದು ಸಬೂಬ ನೀಡಿ, ಜೊತೆಗೆ ಮಳೆಯು ಆಗುತ್ತಿದ್ದು ಕಾಳು ಸರಿಯಿಲ್ಲ ಪ್ರತಿ ಕ್ವಿಂಟಲ್‌ಗೆ ಬರೋಬ್ಬರಿ ನಾಲ್ಕು ನೂರು ರುಪಾಯಿ ಕುಸಿತ ಮಾಡಿದ್ದಾರೆ. ಇದು ರೈತರಿಗೆ ನುಂಗಲಾರದ ತುತ್ತಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಮೆಕ್ಕೆಜೋಳ ದರ ಕುಸಿತದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ತಕ್ಷಣ ರಾಜ್ಯ ಸರ್ಕಾರ ಬೆಂಬಲ ಬೆಲೆ ಕೇಂದ್ರ ತೆರೆಯಬೇಕು. ಇಲ್ಲದಿದ್ದರೆ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುತ್ತಾರೆ ಕೆಲ ದಿನಗಳಲ್ಲಿ ಮೆಕ್ಕೆ ಜೋಳ ಬೆಂಬಲ ಬೆಲೆಗೆ ಖರೀದಿ ಮಾಡದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ರೈತ ಸಂಘಟನೆಯ ಎಚ್ಚರಿಸಿದ್ದಾರೆ.

ಸಂದರ್ಭದಲ್ಲಿ ಉತ್ತರ ಕರ್ನಾಟಕ ಮಹಾಸಭಾ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ, ತಾಲೂಕ ಅಧ್ಯಕ್ಷ ಚಂಬಣ್ಣ ಬಾಳಿಕಾಯಿ, ಸುರೇಶ ರಾಚನಾಯ್ಕರ, ಷಣ್ಮುಖಗೌಡ್ರ ಪಾಟೀಲ್, ಮುಂಜುನಾಥ ಮಾಗಡಿ, ನೀಲಪ್ಪ ಕರ್ಜಕಣ್ಣವರ್, ಚನ್ನಪ್ಪ ಷಣ್ಮುಖಿ, ಚಂದ್ರಕಾಂತ, ದೇವಪ್ಪ ಲಮಾಣಿ ಮತ್ತಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb