Home » News » ಮೆಕ್ಕೆಜೋಳ ಖರೀದಿ ಸಮಸ್ಯೆ: ರೈತರಿಗೆ ಹೊರೆಯಾದ ಕೇಂದ್ರ ಆಮದು ನೀತಿ: ನಿರ್ಬಂಧ ಹೇರಲು ಸಿಎಂ ಸಿದ್ದರಾಮಯ್ಯ ಆಗ್ರಹ…!

ಮೆಕ್ಕೆಜೋಳ ಖರೀದಿ ಸಮಸ್ಯೆ: ರೈತರಿಗೆ ಹೊರೆಯಾದ ಕೇಂದ್ರ ಆಮದು ನೀತಿ: ನಿರ್ಬಂಧ ಹೇರಲು ಸಿಎಂ ಸಿದ್ದರಾಮಯ್ಯ ಆಗ್ರಹ…!

by CityXPress
0 comments

ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು  ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಸಚಿವರಾದ ಎಚ್ ಕೆ ಪಾಟೀಲ್, ಕೆ  ಎಚ್ ಮುನಿಯಪ್ಪ, ಶಿವಾನಂದ ಪಾಟೀಲ, ಕೆ, ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್,  ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಆರ್ಥಿಕ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ : ಪರಮೇಶ ಎಸ್ ಲಮಾಣಿ

ದೆಹಲಿಯಲ್ಲಿರುವ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಆನ್ ಲೈನ್ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು. ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿ ಮೆಕ್ಕೆಜೋಳ ರೈತರ ಸಮಸ್ಯೆ ಬಗ್ಗೆ ವಿವರಿಸಿ ನೆರವು ಕೇಳಿರುವುದಾಗಿ ಅವರು ಸಭೆಗೆ ವಿವರಿಸಿದರು.

banner

ಸಭೆಯಲ್ಲಿ ಮೆಕ್ಕೆಜೋಳ ಬೆಲೆ ಕಡಿಮೆಯಾಗಲು ಕಾರಣಗಳು, ಖರೀದಿ ಮತ್ತು ಪರಿಹಾರೋಪಾಯಗಳನ್ನು ಕುರಿತು ಚರ್ಚೆ ನಡೆಯಿತು.

ರಾಜ್ಯದಲ್ಲಿ ದಿಡೀರ್  ಮೆಕ್ಕೆಜೋಳ ಬೆಲೆ ಕಡಿಮೆ ಆಗಲು ಕಾರಣವಾದ ಸಂಗತಿಗಳು:

* ಒಂದು ಕಡೆ ರಾಜ್ಯದಲ್ಲಿ ಮತ್ತು ದೇಶದಲ್ಲಿ  ಮೆಕ್ಕೆಜೋಳ ಉತ್ಪಾದನೆ ಹೆಚ್ಚಳವಾಗಿದೆ. ಇದು ಗೊತ್ತಿದ್ದರೂ ಕೇಂದ್ರ ಸರ್ಕಾರ ವಿದೇಶಗಳಿಂದ 70 ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ಆಮದು ಮಾಡಿಕೊಂಡಿದೆ. ಇದರಿಂದಾಗಿ ರಾಜ್ಯದ ಮತ್ತು ದೇಶದ ಮೆಕ್ಕೆಜೋಳ ಬೆಳೆದ ರೈತರಿಗೆ ವಿಪರೀತ ಹೊರೆ ಆಗಿದೆ.

*ಮೆಕ್ಕೆಜೋಳದಿಂದ ಎಥೆನಾಲ್ ಉತ್ಪಾದಿಸಲು ಕೇಂದ್ರ ಸರ್ಕಾರ ರಾಜ್ಯಕ್ಕೆ ನಿಗದಿ ಮಾಡಿರುವ ಕೋಟಾ ಪ್ರಮಾಣವೂ ಅತ್ಯಂತ ಕಡಿಮೆ ಇದೆ. ಇದರಿಂದಾಗಿ ಡಿಸ್ಟಿಲರಿಗಳು ಮೆಕ್ಕೆ ಖರೀದಿಸುವ ಪ್ರಮಾಣವೂ ಕಡಿಮೆ ಆಗಿದೆ.

* ನಿಯಮ ಪಾಲಿಸದ ಏಜೆನ್ಸಿಗಳಿಂದ ಸಮಸ್ಯೆ: ಕೇಂದ್ರದ ನೋಡಲ್ ಏಜೆನ್ಸಿಗಳಾದ ನಾಫೆಡ್/ಎನ್‌ ಸಿಸಿಎಫ್ ಮೂಲಕ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆ ಜೋಳ ಸಂಗ್ರಹಣೆ ಮತ್ತು ಎಥೆನಾಲ್ ಉತ್ಪಾದನೆಗೆ ಬಳಕೆಗಾಗಿ ಈಗಾಗಲೇ ಕೇಂದ್ರ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಆದರೆ ಸಂಬಂಧಪಟ್ಟ ನೋಡಲ್ ಏಜೆನ್ಸಿಗಳು ಮಾರ್ಗಸೂಚಿಯಂತೆ ಇನ್ನೂ ಖರೀದಿ ಪ್ರಕ್ರಿಯೆಯನ್ನೇ ಆರಂಭಿಸಿಲ್ಲ. ಇದು ಸಮಸ್ಯೆ ಬಿಗಡಾಯಿಸಲು ಮುಖ್ಯ ಕಾರಣ.

* ಡಿಸ್ಟಿಲರಿಗಳು ಮೆಕ್ಕೆ ಜೋಳ ಬೆಲೆ ಕಡಿಮೆ ಇದ್ದಾಗಲೇ ಮೆಕ್ಕೆಜೋಳ ಖರೀದಿಸಿ ಶೇಖರಣೆ ಮಾಡಿಕೊಂಡಿವೆ. ಇದರಿಂದಾಗಿ ಈಗ ಖರೀದಿಗೆ ಮುಂದೆ ಬರುತ್ತಿಲ್ಲ. ಇದು ಸ್ಪಷ್ಟ ನಿಯಮ ಉಲ್ಲಂಘನೆಯಾಗಿದ್ದು ಡಿಸ್ಟಿಲರಿಗಳು ನಿಯಮಾನುಸಾರ ಮೆಕ್ಕೆ ಜೋಳ ಖರೀದಿಗೆ ಮುಂದಾಗಬೇಕು.

ಸಭೆಯಲ್ಲಿ ವ್ಯಕ್ತವಾದ ಸಲಹೆಗಳು:

* ಮೆಕ್ಕೆ ಜೋಳ ಆಮದು ಮೇಲೆ ಕೇಂದ್ರ ಸರ್ಕಾರ ತಕ್ಷಣ ನಿಯಂತ್ರಣ ಹೇರುವ ಮೂಲಕ ಬೆಲೆಯಲ್ಲಿ ಸ್ಥಿರತೆ ಸಾಧಿಸಲು ಸಾಧ್ಯವಿದೆ. ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದು.

* ಸಧ್ಯಕ್ಕೆ 8ಲಕ್ಷ ಟನ್ ಮೆಕ್ಕೆ ಜೋಳ ತಕ್ಷಣ ಖರೀದಿಸಲು ಸದರಿ ಏಜೆನ್ಸಿಗಳು ಕ್ರಮ ಕೈಗೊಳ್ಳಲು ಒತ್ತಾಯಿಸಬೇಕು.

* ಖರೀದಿ ಕೇಂದ್ರಗಳನ್ನು ನಾಫೆಡ್/ ಎನ್‌ ಸಿಸಿಎಫ್ ಇನ್ನೂ ಆರಂಭಿಸದಿರುವುದರಿಂದ ತೊಂದರೆಯಾಗಿದ್ದು, ಮಾರುಕಟ್ಟೆಯಲ್ಲಿ ಧಾರಣೆಯನ್ನು ಸ್ಥಿರಗೊಳಿಸಲು ತಕ್ಷಣ ಖರೀದಿ ಪ್ರಾರಂಭಿಸಬೇಕು.

ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು:

ಬೆಲೆ ಕುಸಿತದಿಂದ ಸಂಕಷ್ಜ ಎದುರಿಸುತ್ತಿರುವ ರಾಜ್ಯದ ಮೆಕ್ಕೆ ಜೋಳ ರೈತರ ನೆರವಿಗೆ ಸರ್ಕಾರ ಎಲ್ಲಾ ರೀತಿಯ ನೆರವು ಒದಗಿಸಬೇಕು.

70ಲಕ್ಷ ಮೆ. ಟನ್ ಮೆಕ್ಕೆ ಜೋಳವನ್ನು ಆಮದು ಮಾಡಿಕೊಳ್ಳಲಾಗಿದೆ. ನಮ್ಮ ದೇಶದಲ್ಲಿಯೇ ಉತ್ಪಾದನೆ ಹೆಚ್ಚಾಗಿರುವುದರಿಂದ ಆಮದು ಮೇಲೆ ನಿರ್ಬಂಧ ವಿಧಿಸಲು  ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧಾರ.

ಎಥೆನಾಲ್ ಉತ್ಪಾದನೆಗಾಗಿ ಮೆಕ್ಕೆ ಜೋಳವನ್ನು ತಕ್ಷಣ ಖರೀದಿಸಲು ಸೂಚಿಸಿ ರಾಜ್ಯದ ಪ್ರಮುಖ ಡಿಸ್ಟಿಲರಿಗಳೊಂದಿಗೆ ಸಭೆ ನಡೆಸಲು ಸೂಚನೆ.

ಇದೇ ರೀತಿ ಕುಕ್ಕುಟೋದ್ಯಮಕ್ಕೆ ಮೆಕ್ಕೆ ಜೋಳದ ಬೇಡಿಕೆಯಿದ್ದು, ಅವರೊಂದಿಗೆ ಸಹ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb