Sunday, April 20, 2025
Homeರಾಜ್ಯಸಚಿವೆ ಲಕ್ಷ್ಮಿ‌ ಹೆಬ್ಬಾಳ್ಕರ್ ಕಾರು‌ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದ ಕಾರು!

ಸಚಿವೆ ಲಕ್ಷ್ಮಿ‌ ಹೆಬ್ಬಾಳ್ಕರ್ ಕಾರು‌ ಅಪಘಾತ: ಮರಕ್ಕೆ ಡಿಕ್ಕಿ ಹೊಡೆದ ಕಾರು!

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಮಹಿಳಾ ಮತ್ತು ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು​ ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ನಡೆದಿದೆ.

ನಿನ್ನೆ ಬೆಂಗಳೂರಿನಲ್ಲಿ ಕಾಂಗ್ರೆಸ್​ ಶಾಸಕಾಂಗ ಸಭೆ ಮುಗಿಸಿ ಇಂದು ಬೆಳಿಗ್ಗೆ ವಾಪಾಸ್ ಬೆಳಗಾವಿಗೆ ಬರುವಾಗ ಈ ಅಪಘಾತ ಸಂಭವಿಸಿದೆ. ಬೆಳಿಗ್ಗೆ 6 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.

ಭೀಕರ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಎಂಎಲ್​ಸಿ ಚೆನ್ನರಾಜು ಹಟ್ಟಿಹೊಳಿ ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರ್​ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿದೆ. ಹಾಗಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನು ಮತ್ತು ಮುಖಕ್ಕೆ ಸಣ್ಣಪುಟ್ಟ ಗಾಯಗಳು ಆಗಿವೆ. ಎಂಎಲ್​ಸಿ ಚೆನ್ನರಾಜ ಹಟ್ಟಿಹೊಳಿ ಅವರಿಗೂ ತಲೆಗೆ ಗಾಯ ಆಗಿದೆ.

ಸದ್ಯ ಇಬ್ಬರನ್ನು ಚಿಕಿತ್ಸೆಗಾಗಿ ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಕಾರಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್​​​ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments