Home » News » ಮೆಕ್ಕೆಜೋಳ ಖರೀದಿ ಕೇಂದ್ರ ಹಾಗೂ ಬೆಂಬಲ ಬೆಲೆ ಘೋಷಿಸಲು ಸಚಿವರಿಗೆ ಶಾಸಕ ಡಾ.ಚಂದ್ರು ಲಮಾಣಿ ಅವರಿಂದ ಮನವಿ…!

ಮೆಕ್ಕೆಜೋಳ ಖರೀದಿ ಕೇಂದ್ರ ಹಾಗೂ ಬೆಂಬಲ ಬೆಲೆ ಘೋಷಿಸಲು ಸಚಿವರಿಗೆ ಶಾಸಕ ಡಾ.ಚಂದ್ರು ಲಮಾಣಿ ಅವರಿಂದ ಮನವಿ…!

by CityXPress
0 comments

ಗದಗ: ಮೆಕ್ಕೆಜೋಳ ಬೆಲೆ ಕುಸಿತದಿಂದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿಸುವಂತೆ ಶಿರಹಟ್ಟಿ ಮತ ಕ್ಷೇತ್ರದ ಶಾಸಕ‌ಡಾ. ಚಂದ್ರು ಲಮಾಣಿ ಅವರು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ.
ಅವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದ್ದಾರೆ.

ಕೃಷಿ ಸಚಿವರಿಗೆ ಭೇಟಿಯಾಗಿದ್ದ ಶಾಸಕ ಡಾ.ಚಂದ್ರು ಲಮಾಣಿ ಅವರು, ‘ರಾಜ್ಯದಲ್ಲಿ ಲಕ್ಷ-ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಮೆಕ್ಕೆಜೋಳ ಬಿತ್ತನೆ ಮಾಡಲಾಗಿದ್ದು, ಆದರೆ ಮೆಕ್ಕೆಜೋಳದ ಬೆಲೆ ಕುಸಿದಿರುವ ಕಾರಣ ಬೆಳೆಗಾರರು ಕಂಗಾಲಾಗಿದ್ದಾರೆ’ ಎಂದು ವಿವರಿಸಿರುವ ಮನವಿಪತ್ರ ಸಲ್ಲಿಸಿದರು.

ವರದಿ: ಪರಮೇಶ ಎಸ್ ಲಮಾಣಿ

ಗದಗ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ನನ್ನ ಕ್ಷೇತ್ರದಲ್ಲಿ ಪ್ರತಿಶತ 90ರಷ್ಟು ಮೆಕ್ಕೆಜೋಳ ಬೆಳೆದಿದ್ದಾರೆ. ಆದರೆ ಬೆಲೆ ಕುಸಿಯದಿಂದ ರೈತರು ಕಷ್ಟದ ಬವನೆಯಲ್ಲಿದ್ದಾರೆ. ರೈತರ ಪ್ರತಿಭಟನೆಗೆ ಹಾಗೂ ಮನವಿಗೆ ಸರ್ಕಾರ ಸ್ಪಂದಿಸಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

banner

‘ಎಥೆನಾಲ್‌ ಉತ್ಪಾದನೆ, ಜಾನುವಾರು ಮೇವು, ಡಿಸ್ಟಿಲರಿ ಮತ್ತಿತರ ಕೈಗಾರಿಕೆಗಳಲ್ಲಿ ಮೆಕ್ಕಜೋಳಕ್ಕೆ ಬೇಡಿಕೆ ಇದೆ. ಹಿಂದಿನ ಆರ್ಥಿಕ ವರ್ಷದಲ್ಲಿ ಎಥೆನಾಲ್‌ ತಯಾರಿಕೆಗಾಗಿ ಕೇಂದ್ರ ಸರ್ಕಾರವು ನಾಫೆಡ್‌ ಮೂಲಕ ರಾಜ್ಯದಿಂದ 410 ಟನ್‌ ಮೆಕ್ಕೆಜೋಳ ಖರೀದಿಸಿತ್ತು. ಈ ಬಾರಿಯೂ ಖರೀದಿಸಲು ಅವಕಾಶವಿದೆ’ ಎಂದಿದ್ದಾರೆ.

‘ಕೇಂದ್ರ ಸರ್ಕಾರವು ಪಡಿತರ ಮತ್ತು ಜೈವಿಕ ಇಂಧನ ಸಚಿವಾಲಯಗಳ ಅಧೀನದ ಎಫ್‌ಸಿಐ, ನಾಫೆಡ್‌, ಎನ್‌ಸಿಸಿಎಫ್‌ಗಳ ಮೂಲಕ ಮೆಕ್ಕೆಜೋಳ ಖರೀದಿಸಬಹುದಾಗಿದೆ. ಪ್ರತಿ ಕ್ವಿಂಟಲ್‌ಗೆ ₹2,400ರ ದರದಲ್ಲಿ ಕೇಂದ್ರ ಸರ್ಕಾರ ಬೆಂಬಲ ಘೋಷಿಸಿದೆ ಅಷ್ಟಕ್ಕಾದರು ಸರ್ಕಾರ ಖರೀದಿಸಲು ಆದೇಶ ಮಾಡಬೇಕು ಎಂದು ಎಂದು ಕೋರಿದ್ದಲ್ಲದೇ,

ಬೆಳೆ ಹಾನಿ ಮತ್ತು ಬೆಳೆ ಪರಿಹಾರ ನೀಡಲು ಸಚಿವರನ್ನು ಮನವಿ ಮಾಡಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Website designed by Dreamweb
error: Content is protected by Dreamweb