ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಭೇಟಿಗಾಗಿ ಕುವೈತ್‌ಗೆ ಪ್ರಯಾಣ ಬೆಳಸಿದ್ದಾರೆ. 43 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ನೀಡುವ ಮೊದಲ ಭೇಟಿಯಾಗಿದೆ. ಕುವೈತ್‌ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಇಂದು ಪ್ರಧಾನಿ ಮೋದಿ ಕುವೈತ್ ಗೆ ಪ್ರಯಾಣ ಬೆಳೆಸಿದ್ದಾರೆ
ಅವರ ಎರಡು ದಿನಗಳ ಗಲ್ಫ್ ರಾಷ್ಟ್ರ ಭೇಟಿಯ ಸಂದರ್ಭದಲ್ಲಿ ಭಾರತ ಮತ್ತು ಕುವೈತ್ ರಕ್ಷಣೆ ಮತ್ತು ವ್ಯಾಪಾರ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಬಲಪಡಿಸುವತ್ತ ಗಮನ ಹರಿಸುವ ನಿರೀಕ್ಷೆಯಿದೆ.
ಕುವೈತ್ ನ ಉನ್ನತ ನಾಯಕರೊಂದಿಗೆ ಮೋದಿ ಮಾತುಕತೆ ನಡೆಸಲಿದ್ದಾರೆ, ಭಾರತೀಯ ಕಾರ್ಮಿಕ ಶಿಬಿರಕ್ಕೆ ಭೇಟಿ ನೀಡಲಿದ್ದಾರೆ, ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಮತ್ತು ಗಲ್ಫ್ ಕಪ್ ಫುಟ್ಬಾಲ್ ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.