ಗದಗ, ಎ. 30: ಜಿಲ್ಲೆಯ ಪ್ರಮುಖ ಪ್ರವಾಸಿ ಕ್ಷೇತ್ರವಾಗಿ ಬೆಳೆಯುತ್ತಿರುವ ಭೀಷ್ಮ ವಿಹಾರ ಧಾಮದಲ್ಲಿ ನೂತನ ಸೇತುವೆಯನ್ನ ಇಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಇಲಾಖೆಗಳ ಸಚಿವರೂ ಆಗಿರುವ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ. ಪಾಟೀಲ ಅವರು ಭವ್ಯವಾಗಿ ಈ ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು.
ಭೀಷ್ಮ ವಿಹಾರ ಧಾಮದ ನಡುಗಡ್ಡೆ ಭಾಗಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯು ಸ್ಥಳೀಯರ ದೈನಂದಿನ ಸಂಚಾರವನ್ನು ಸುಲಭಗೊಳಿಸುವುದರ ಜೊತೆಗೆ ವಿಹಾರಿ ಪ್ರವಾಸೋದ್ಯಮಕ್ಕೂ ಮತ್ತಷ್ಟು ಉತ್ತೇಜನ ನೀಡಲಿದೆ. ಉದ್ಘಾಟನಾ ಸಮಾರಂಭವು ಸರಳವಾದರೂ ಸಾಂಸ್ಕೃತಿಕ ಶೋಭೆಯನ್ನು ಪಡೆದಿದ್ದು, ಸ್ಥಳೀಯರ ಉತ್ಸಾಹಭರಿತ ಹಾಜರಾತಿ ಗಮನಸೆಳೆಯಿತು.

ಮೇಲಿನ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶ್ರೀ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಬಿ.ಎಸ್. ನೇಮಗೌಡ, ಮಾಜಿ ಶಾಸಕ ಬಿ.ಬಿ. ಅಸೂಟಿ, ಗುರಣ್ಣ ಬಳಗಾನೂರ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ನೂತನ ಸೇತುವೆಯ ಮಹತ್ವವನ್ನು ಹಿರಿದಾಗಿ ವಿವರಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ ಅವರು, “ಭೀಷ್ಮ ವಿಹಾರ ಧಾಮವನ್ನು ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಈ ಸೇತುವೆ ನಿರ್ಮಿಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮೂಲಭೂತ ಸೌಲಭ್ಯಗಳೊಂದಿಗೆ ಈ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು” ಎಂದು ತಿಳಿಸಿದ್ದಾರೆ.
