ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯದ ಒಟ್ಟು ಫಲಿತಾಂಶ ಶೇಕಡಾ 73.45 ಆಗಿದ್ದು, ಕಳೆದ ವರ್ಷದಲ್ಲಿನ ಶೇಕಡಾವಾರುಗಿಂತ ಸ್ವಲ್ಪ ಕುಸಿತ ಕಂಡಿದೆ. ಆದರೆ, ಈ ಬಾರಿ ಕೂಡ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ವಿಜ್ಞಾನ ವಿಭಾಗದಲ್ಲಿ 600ರಲ್ಲಿ 599 ಅಂಕ ಪಡೆದು ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ. ಹಾಗೇ, ಮಂಗಳೂರಿನ ಕೆನರಾ ಪಿಯು ಕಾಲೇಜಿನ ದೀಪಶ್ರೀ ವಾಣಿಜ್ಯ ವಿಭಾಗದಲ್ಲಿ 599 ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಕೊಂಡಿದ್ದಾರೆ.

ಮೇಲಿನ ಪೋಸ್ಟ್ ಮೇಲೆ ಟಚ್ ಮಾಡಿದರೆ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಕಲಾ ವಿಭಾಗದಲ್ಲಿ ಬಳ್ಳಾರಿ ಜಿಲ್ಲೆಯ ಇಂದು ಪಿಯು ಕಾಲೇಜಿನ ಸಂಜನಾ ಬಾಯಿ 597 ಅಂಕ ಗಳಿಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಮಾಹಿತಿಯ ಪ್ರಕಾರ, ಸರ್ಕಾರಿ ಕಾಲೇಜುಗಳಲ್ಲಿ ಶೇಕಡಾ 57%, ಅನುದಾನಿತ ಕಾಲೇಜುಗಳಲ್ಲಿ 69%, ಹಾಗೂ ಅನುದಾನ ರಹಿತ ಕಾಲೇಜುಗಳಲ್ಲಿ ಶೇಕಡಾ 90 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಒಟ್ಟಾರೆ ಪ್ರತೀ ವರ್ಷದಂತೆಯೇ ಈ ಬಾರಿಯೂ ಬಾಲಕಿಯರು ಶ್ರೇಷ್ಠತೆ ಸಾಧಿಸಿದ್ದು, ಪ್ರತಿಭೆಯಲ್ಲಿ ಹೆಣ್ಣು ಮಕ್ಕಳು ಮತ್ತೆ ತಮ್ಮ ಸಮ್ಮೇಲನವನ್ನು ತೋರಿಸಿದ್ದಾರೆ.