ಒಳ ಮೀಸಲಾತಿ ನಿರ್ಧಾರ ಕೈಗೊಳ್ಳುವವರೆಗೆ ರಾಜ್ಯ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಹೊಸದಾಗಿ ಅಧಿಸೂಚನೆ ಹೊರಡಿಸುವುದಕ್ಕೆ ತಡೆ ನೀಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ನಿರ್ಧಾರ ಕೈಗೊಳ್ಳುವವರೆಗೆ ಮೀಸಲಾತಿ ಅನ್ವಯಿಸುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಬಾರದು ಎಂದು ಅಕ್ಟೋಬರ್ 28ರಂದು ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಈ ನಿರ್ಣಯಕ್ಕೆ ಪೂರಕವಾಗಿ ಆದೇಶ ಹೊರಡಿಸಲಾಗಿದೆ.