ಬೆಳಗಾವಿ: ಬಿಜೆಪಿಯವರು ಈ ಹಿಂದೆ ಅಧಿಕಾರದಲ್ಲಿದ್ದಾಗ ಮುಸ್ಲಿಂರ ಶೇ.4ರಷ್ಟು ಮೀಸಲಾತಿ ವಾಪಸ್ ಪಡೆದು ಒಕ್ಕಲಿಗ & ಲಿಂಗಾಯತ ಸಮುದಾಯಗಳಿಗೆ ಹಂಚಿಕೆ ಮಾಡಿದ್ದರು.
ಪಂಚಮಸಾಲಿ ಸಮುದಾಯದ 2A ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಅಫಿಡವಿಟ್ & ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಬೆಳಗಾವಿ ಅಧಿವೇಶನದಲ್ಲಿ ಹೇಳಿದ್ದಾರೆ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, 2A, 3A ಹಾಗೂ 3B ಎಂದು ವಿಂಗಡಿಸಲಾಗಿದೆ. ವೀರಶೈವ ಲಿಂಗಾಯಿತ & ಪಂಚಮಸಾಲಿ ಜಾತಿಗಳು 3B ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2A ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ.
ಈ ಹಿನ್ನೆಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಾಟಗಾರರಿಗೆ ತಿಳಿಸಿದ್ದೇನೆ ಎಂದಿದ್ದಾರೆ.