ರಿಯೊ ಡಿ ಜನೈರೊ: ಜಿ 20 ಶೃಂಗಸಭೆಯ ಹೊರತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಬಾಹ್ಯಾಕಾಶ, ಇಂಧನ ಮತ್ತು ಕೃತಕ ಬುದ್ಧಿಮತ್ತೆಯಂತಹ ಕ್ಷೇತ್ರಗಳಲ್ಲಿ ಜೊತೆಯಾಗಿ ಕೆಲಸ ಮಾಡುವ ಮಾರ್ಗಗಳ ಬಗ್ಗೆ ಚರ್ಚಿಸಿದರು.
ಈ ವರ್ಷದ ಆರಂಭದಲ್ಲಿ ಪ್ಯಾರಿಸ್ನಲ್ಲಿ ಒಲಿಂಪಿಕ್ ಕ್ರೀಡಾಕೂಟ ಮತ್ತು ಪ್ಯಾರಾಲಿಂಪಿಕ್ಸ್ ಅನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಫ್ರೆಂಚ್ ಅಧ್ಯಕ್ಷರನ್ನು ಪ್ರಧಾನಿ ಅಭಿನಂದಿಸಿದರು.
“ನನ್ನ ಸ್ನೇಹಿತ, ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತೋಷದ ವಿಷಯವಾಗಿದೆ” ಎಂದು ಮೋದಿ ಸೋಮವಾರ ತಡರಾತ್ರಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
“ಬಾಹ್ಯಾಕಾಶ, ಇಂಧನ, ಎಐ ಮತ್ತು ಇತರ ಭವಿಷ್ಯದ ಕ್ಷೇತ್ರಗಳಲ್ಲಿ ಭಾರತ ಮತ್ತು ಫ್ರಾನ್ಸ್ ಹೇಗೆ ಜೊತೆಯಾಗಿ ಕೆಲಸ ಮಾಡಬಹುದು ಎಂಬುದರ ಬಗ್ಗೆ ನಾವು ಮಾತನಾಡಿದ್ದೇವೆ. ಎರಡೂ ದೇಶಗಳನಡುವಣ ಸಂಭಂದ ವೃದ್ದಿಯಾಗಲು ನಾವು ಜೊತೆಯಾಗಿ ಕೆಲಸ ಮಾಡುತ್ತವೆ” ಎಂದು ಅವರು ಹೇಳಿದರು.