ಗದಗ: ನಗರದ ಗಾಂಧಿ ವೃತ್ತದಲ್ಲಿ ನ.22 ರಂದು (ನಾಳೆ) ಬೆಳಗ್ಗೆ 10 ರಿಂದ ಸಂಜೆ 6 ಗಂಟೆ ವರೆಗೆ ವಕ್ಷ ಪ್ರಕರಣಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುವುದು ಮತ್ತು ವಕ್ಫದಿಂದ ಶೋಷಣೆಗೆ ಒಳಗಾದ ರೈತರಿಂದ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಶೋಷಣೆಗೆ ಒಳಗಾದ ಸಹಸ್ರಾರು ಸಂಖ್ಯೆಯ ಸಾರ್ವಜನಿಕರು, ರೈತರು, ಮಠಮಂದಿರಗಳು, ಶಾಲೆಗಳು ಹಾಗು ಸಾರ್ವಜನಿಕ ಆಸ್ತಿಗಳನ್ನು ವಕ್ಫಗೆ ಸೇರಿಸಿದ್ದನ್ನು ವಿರೋಧಿಸಿ ಮತ್ತು ಸಂಜೆ ವರೆಗೆ ಮನವಿ ಸ್ವೀಕರಿಸಲಾಗುವುದು
ಪ್ರತಿಭಟನೆಯಲ್ಲಿ ಶಾಸಕ ಸಿ.ಸಿ. ಪಾಟೀಲ, ಎಸ್.ವಿ. ಸಂಕನೂರು, ಕಳಕಪ್ಪ ಬಂಡಿ ಸೇರಿದಂತೆ ಬಿಜೆಪಿ ಮುಖಂಡರು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಿದ್ದಾರೆ.ಸಮಸ್ಯೆಯ ಗಂಭೀರತೆಯನ್ನು ಜಿಲ್ಲೆಯ ಎಲ್ಲ ತಾಲೂಕುವಾರು ಪರಾಮರ್ಶೆ ಮಾಡಲಾಗುವುದು. 3 ತಂಡಗಳನ್ನು ರಾಜ್ಯಾಧ್ಯರು ಈಗಾಗಲೇ ಪ್ರಕಟಿಸಿದ್ದಾರೆ. ಡಿಸೆಂಬರ್ ಮೊದಲ ವಾರದಿಂದ ರಾಜ್ಯಾದ್ಯಂತ ಪ್ರತಿ ಜಿಲ್ಲೆಗಳಿಗೆ ರಾಜ್ಯಮಟ್ಟದ ಸಮಿತಿ ಸದಸ್ಯರು ಪ್ರವಾಸ ಮಾಡಲಿದ್ದಾರೆ.ರೈತರು, ಮಠ ಮಾನ್ಯಗಳು ಮತ್ತು ಸಾರ್ವಜನಿಕರ ಸಮಸ್ಯೆಯನ್ನು ಆಲಿಸಲಿದೆ.
ಅವರ ಸಮಸ್ಯೆಯನ್ನು ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ಪ್ರಸ್ಥಾಪಿಸುತ್ತೇವೆ ಹಾಗೂ ನೈಜ ವರದಿಯನ್ನು ಸದನದಲ್ಲಿ ಚರ್ಚಿಸಲಾಗುತ್ತದೆ ಮತ್ತು ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದ್ದಾರೆ.