ಗದಗ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.ಹಿಂದುಳಿದ ವರ್ಗಗಳ ನಿಗಮಗಳ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಲಾಯಿತು.ಹಿಂದುಳಿದ ವರ್ಗಗಳ ಅನುದಾನವನ್ನ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದು,ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ನೀಡಿಲ್ಲಾ ಅಂತ ಆಕ್ರೋಶ ಪ್ರತಿಭಟನಾಕಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಹಿಂದುಳಿದ ವರ್ಗಗಳಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ಅಪರ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.