ಮಳೆಗಾಲ ಮುಗಿದು ಚಳಿಗಾಲ ಪ್ರಾರಂಭವಾದರೂ ರಾಜ್ಯದ ಕೆಲ ಪ್ರದೇಶದಲ್ಲಿ ಬರುವ 2-3 ದಿನಗಳಲ್ಲಿ ಸಾದಾರಣ ದಿಂದ ಭಾರಿ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಚದುರಿದಂತೆ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. 5 ದಿನಗಳ ಹವಾಮಾನ ಮುನ್ಸೂಚನೆ: ರಾಜ್ಯದ ಕರಾವಳಿ ಮತ್ತು ಮಲೆನಾಡಿಮ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಮತ್ತು ಒತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಮೂರು ದಿನ ಮಳೆ: ಇಂದು (ಡಿಸೆಂಬರ್ 06) ಉತ್ತರ ಕನ್ನಡ, ಧಾರವಾಡ, ಹಾವೇರಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಅಲ್ಲಲ್ಲಿ ಚುದರಿಂದತೆ ಇನ್ನೂ ಕೆಲವೇ ಕ್ಷಣಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಯಾವುದೇ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ.