ಹೈದರಾಬಾದ್: ಗಂಡನೇ ತನ್ನ ಹೆಂಡತಿಯನ್ನ ಬರ್ಬರವಾಗಿ ಹತ್ಯೆ ಮಾಡಿ, ಆಕೆಯ ದೇಹದ ಭಾಗಗಳನ್ನು ಕುಕ್ಕರ್‌ನಲ್ಲಿ ಹಾಕಿ ಬೇಯಿಸಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಹೌದು, ನಿವೃತ್ತ ಸೈನಿಕರೊಬ್ಬ ತಮ್ಮ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ದೇಹದ ಭಾಗಗಳನ್ನು ಪ್ರೆಶರ್ ಕುಕ್ಕರ್‌ನಲ್ಲಿ ಹಾಕಿ ಬೇಯಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹೈದರಾಬಾದ್‌ನ ಹೊರವಲಯದಲ್ಲಿರುವ ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರ ಪ್ರಕಾರ ಗುರುಮೂರ್ತಿ ಎನ್ನುವಾತ ಜನವರಿ 18 ರಂದು ರಾಚಕೊಂಡ ಪೊಲೀಸ್ ಕಮಿಷನರೇಟ್ ಅಡಿಯಲ್ಲಿ ಮೀರಪೇಟ್ ಪೊಲೀಸ್ ಠಾಣೆಗೆ ತಮ್ಮ ಪತ್ನಿ ವೆಂಕಟ ಮಾಧವಿ (35) ಕಾಣೆಯಾಗಿದ್ದಾರೆ ಎಂದು ದೂರು ನೀಡಿದ್ದನು.

ತನಿಖಾಧಿಕಾರಿಗಳು ಗುರು ಮೂರ್ತಿಯನ್ನು ವಿಚಾರಣೆಗೊಳಪಡಿಸಿದಾಗ, ಪತಿ ಗುರುಮೂರ್ತಿ ಘೋರ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಮತ್ತು ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾನೆ.
ತನ್ನ ಪತ್ನಿಯನ್ನು ಕೊಲೆ ಮಾಡಿ, ಶವವನ್ನು ತುಂಡು ಮಾಡಿ ಪ್ರೆಶರ್ ಕುಕ್ಕರ್ ನಲ್ಲಿ ಬೇಯಿಸಿದ್ದಾಗಿ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ. ನಂತರ, ಅವರು ಬೇಯಿಸಿದ ದೇಹದ ಭಾಗಗಳನ್ನು ಜಿಲ್ಲೆಲಗುಡಾದ ಕೆರೆಗೆ ಎಸೆದಿದ್ದಾನೆ.
ಪೊಲೀಸರು ಆತನ ಹೇಳಿಕೆಯನ್ನು ದಾಖಲಿಸಿಕೊಂಡು ಸಾಕ್ಷ್ಯ ಸಂಗ್ರಹಿಸಲು ಆರಂಭಿಸಿದ್ದಾರೆ.ಕೆರೆಯಲ್ಲಿ ಸಂತ್ರಸ್ತೆಯ ದೇಹದ ಭಾಗಗಳಿಗಾಗಿ ಹುಡುಕಾಟ ನಡೆದಿದೆ. ಗುರುಮೂರ್ತಿ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ನಿವೃತ್ತರಾದ ನಂತರ ಕಾಂಚನ್ ಬಾಗ್‌ನಲ್ಲಿರುವ ಡಿಆರ್‌ಡಿಒದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದನು.
ಸುಮಾರು 13 ವರ್ಷಗಳ ಹಿಂದೆ ಮಾಧವಿ ಅವರನ್ನು ವಿವಾಹವಾಗಿದ್ದನು. ತಾವಿಬ್ಬರು ತಮಗಿಬ್ಬರು ಎಂಬಂತೆ ಇಬ್ಬರು ಮಕ್ಕಳನ್ನ ಹೊಂದಿದ್ದರು. ತನ್ನ ಹೆಂಡತಿಯನ್ನು ಕೊಂದ ನಂತರ, ಆರೋಪಿಯು ತನ್ನ ಹೆತ್ತವರೊಂದಿಗೆ ಮೀರ್‌ಪೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಯಾರಿಗೂ ತನ್ನ ಮೇಲೆ ಅನುಮಾನ ಬಾರದು ಎಂದು ಸ್ವತಃ ತಾನೇ ಠಾಣೆಗೆ ತೆರಳಿ ದೂರು ನೀಡಿದ್ದನು.
ಪ್ರಕರಣದ ತನಿಖೆ ಮುಂದುವರೆದಿದ್ದು, ಶೀಘ್ರದಲ್ಲೇ ಎಲ್ಲಾ ವಿವರಗಳನ್ನು ಬಹಿರಂಗಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನು ತನ್ನ ಹೆಂಡತಿಯನ್ನ ಈ ರೀತಿ ಘನಗೋರ ಕೃತ್ಯಕ್ಕೆ ಬಳಸುವದಕ್ಕಿಂತ ಮುಂಚೆ, ಆರೋಪಿ ಗುರುಮೂರ್ತಿ ನಾಯಿಯ ಮೇಲೆ ಪ್ರಯೋಗ ಮಾಡಿದ್ದನೆಂದು ತಿಳಿದು ಬಂದಿದೆ.