ಕರ್ನಾಟಕ ಮಾಜಿ ಮುಖ್ಯಮಂತ್ರಿ, ಕೇಂದ್ರದ ವಿದೇಶಾಂಗ ಸಚಿವರು ಆಗಿದ್ದ ಹಿರಿಯ ರಾಜಕಾರಣ ಎಸ್.ಎಂ. ಕೃಷ್ಣ ಅವರು ಇಂದು ಮಂಗಳವಾರ ಬೆಳಗ್ಗೆ 3.30ರ ಸಮಯದಲ್ಲಿ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕೆಲವು ಭಾರಿ ಆಸ್ಪತ್ರೆಗೂ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು (ಡಿ.10) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಮಾಜಿ ಸಿಎಂ ಎಸ್‌ಎಂ ಕೃಷ್ಣ (92) ಅವರು ಬಳಲುತ್ತಿದ್ದರು. ಅವರನ್ನು ಚಿಕಿತ್ಸೆಗಾಗಿ ಕೆಲವು ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಕಾರಿ ಆಗದೇ ಇಂದು ಬೆಳಗಿನ ಜಾವ ಆಸ್ಪ್ರತ್ರೆಯಲ್ಲಿಯೇ ಅವರು ಮೃತಪಟ್ಟಿದ್ದಾರೆ. ಅವರ ಪಾರ್ಥಿವ ಶರೀರವನ್ನು ಹುಟ್ಟೂರಾದ ಮದ್ದೂರಿಗೆ ಕೊಂಡೊಯ್ಯುವ ಸಾಧ್ಯತೆ ಇದೆ.
ಕರ್ನಾಟಕದ 16ನೇ ಮುಖ್ಯಮಂತ್ರಿಯಾಗಿ 1999ರಲ್ಲಿ ಅಧಿಕಾರ ಸ್ವೀಕರಿಸಿದ್ದ ಮಾಜಿ ಮುಖ್ಯಮಂತ್ರಿ ಎಸ್‌ಎಂ.ಕೃಷ್ಣ ಅವರು 2004ರ ತನಕ ಪೂರ್ಣಾವಧಿಗೆ ಸಿಎಂ ಆಗಿ ಸೇವೆ ನೀಡಿದ್ದಾರೆ. ಮುಖ್ಯಮಂತ್ರಿ ಅವಧಿ ಮುಗಿಯುತ್ತಿದ್ದಂತೆ 2008ರವರೆಗೆ ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ರಾಜ್ಯಪಾಲರಾದರು. ವಿದೇಶಾಂಗ ಸಚಿವರಾಗಿಯು ಕಾರ್ಯ ನಿರ್ವಹಿಸಿದ್ದಾರೆ. ಸ್ಪೀಕರ್ ಆಗಿಯುವ ಸೇವೆ ನೀಡಿದ್ದು, ವಿವಿಧ ಹಂತಗಳಲ್ಲಿ ರಾಜಕೀಯ ಅನುಭವ ಪಡೆದುಕೊಂಡಿದ್ದರು.
ರಾಜಕಾರಣದಲ್ಲಿ ಸಜ್ಜನ, ಶಾಂತ ಸ್ವಭಾವ, ಉತ್ತಮ ಆಡಳಿತಗಾರ, ಮೌಲ್ಯಯುತ ಹಿರಿಯ ರಾಜಕೀಯ ನಾಯಕರೊಬ್ಬರನ್ನು ರಾಜ್ಯ ಕಳೆದುಕೊಂಡಂತಾಗಿದೆ.