ಗದಗ, ಏಪ್ರಿಲ್ 9: ಗದಗ ಜಿಲ್ಲೆಯ ಮುಳಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ದಾರುಣ ಘಟನೆ ಇದೀಗ ಬೆಳಕಿಗೆ ಬಂದಿದೆ. ತನ್ನದೇ ಮಗಳ ಮೇಲೆ ಕಾಮುಕ ತಂದೆ ಮಾಡಿದ ನಿರಂತರ ಅತ್ಯಾಚಾರದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೂಲವಿವರಗಳ ಪ್ರಕಾರ, 55 ವರ್ಷದ ತಂದೆ, ತನ್ನ 16 ವರ್ಷದ ಅಪ್ರಾಪ್ತ ಮಗಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ. ಈ ಪೈಶಾಚಿಕ ಕೃತ್ಯದಿಂದ ಬಾಲಕಿ ಗರ್ಭಿಣಿಯಾಗಿದ್ದು, ತಾಯಿಯು ದೂರು ನೀಡಿದ ಬಳಿಕ ಈ ಘಟನೆ ಬಯಲಾಗಿದೆಯಂತೆ.

ಮೇಲಿನ ಈ ಪೋಸ್ಟ್ ಮೇಲೆ ಟಚ್ ಮಾಡಿದಲ್ಲಿ, ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ಬಾಲಕಿಯನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯಕೀಯ ಪರೀಕ್ಷೆಯ ನಂತರ ಬಾಲಕಿ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.
ತಾಯಿಯ ದೂರಿನಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಪೋಕ್ಸೊ (POCSO) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.
ಈ ಘಟನೆ ಸ್ಥಳೀಯರಲ್ಲಿ ಆಕ್ರೋಶ ಹುಟ್ಟುಹಾಕಿದ್ದು, ತಾನೇ ರಕ್ಷಕನಾಗಬೇಕಾದ ತಂದೆಯಿಂದ ಬಾಳಿಗೆ ಬೆಂಕಿಹಚ್ಚಿದ ಘಟನೆ ನಡೆದು ಮಾನವೀಯತೆಯ ಘನತೆ ಕೆಡಿಸಿದೆ ಎಂಬ ಮಾತು ಕೇಳಿ ಬರುತ್ತಿದೆ.

ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತಿದೆ.