ಲಕ್ಷ್ಮೇಶ್ವರ: ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮುತ್ತಪ್ಪ ರೈ ರವರ ಕಿರಿಯ ಪುತ್ರ ರಿಕ್ಕಿ ರೈ ಅವರ ಮೇಲೆ ಮಧ್ಯರಾತ್ರಿ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯಿಂದ ತಾಲೂಕ ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಲಕ್ಷ್ಮೇಶ್ವರ ತಾಲೂಕ ಅಧ್ಯಕ್ಷ ರಮೇಶ ಹಂಗನಕಟ್ಟಿ ಮಾತನಾಡಿ, ರಿಕ್ಕಿ ರೈ ಸಾಮಾನ್ಯವಾಗಿ ತಾವೇ ಕಾರು ಚಾಲನೆ ಮಾಡತ್ತಿರುತ್ತಾರೆ. ಕಾರಣ ದಾಳಿಕೋರರು ಡ್ರೈವಿಂಗ್ ಸೀಟಿನ ಮೇಲೆ ಗುರಿ ಇಟ್ಟಿದ್ದರು. ಆದರೆ ಈ ಬಾರಿ ಕಾರನ್ನು ಚಾಲಕ ರಾಜು ಚಲಾಯಿಸುತ್ತಿದ್ದು ಗುಂಡಿನ ದಾಳಿಯ ವೇಳೆ ತಕ್ಷಣ, ರಾಜು ಮುಂದೆ ಬಗ್ಗಿದ್ದರಿಂದ ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಆದರೆ, ಪಕ್ಕದ ಸೀಟ್‌ನಲ್ಲಿದ್ದ ರಿಕ್ಕಿ ರೈ ಅವರ ಮೂಗು ಮತ್ತು ಕೈಗೆ ಗುಂಡು ತಾಕಿದ್ದು, ಗಂಭೀರ ಗಾಯಗೊಂಡಿದ್ದಾರೆ ಎಂದರು.

ಮೇಲಿನ ಈ ಪೋಸ್ಟ್ ನ್ನ ಟಚ್ ಮಾಡಿದಲ್ಲಿ ಕಾಲೇಜಿನ ಸಂಪೂರ್ಣ ಮಾಹಿತಿ ಒದಗುತ್ತದೆ.
ದಾಳಿ ನಡೆಸಿದ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಬೇಕು. ದಾಳಿಯ ಹಿಂದಿನ ಕಾಣದ ಕೈವಾಡಗಳು ಯಾರಿದ್ದಾರೆ ಎನ್ನುವುದನ್ನು ನಿಷ್ಪಕ್ಷಪಾತವಾಗಿ ರಾಜಕೀಯ ರಹಿತ ತನಿಖೆಯನ್ನು ನಡೆಸಬೇಕು. ಕನ್ನಡ ನಾಡಿನ ನುಡಿ ಸೇವೆ ಮಾಡುತ್ತಿರುವ ರಿಕ್ಕಿ ರೈ ರವರ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ. ಸರ್ಕಾರಕ್ಕೆ ಒತ್ತಾಯ ಮಾಡುತ್ತೇವೆ. ರಿಕ್ಕಿ ರೈ ಅವರಿಗೆ ಸರ್ಕಾರದಿಂದ ಸೂಕ್ತ ಭದ್ರತೆ ನೀಡಬೇಕು. ಸರ್ಕಾರ ಈ ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿ ಪಡಿಸಬೇಕು, ಇದನ್ನ ಮಾಡದೆ ಹೋದರೆ ಜಯ ಕರ್ನಾಟಕ ಸಂಘಟನೆಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವಡು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಯ ಕರ್ನಾಟಕ ನಗರ ಘಟಕದ ಅಧ್ಯಕ್ಷ ಸುಲೇಮಾನ ಆಡೂರ ಗೌರವಾಧ್ಯಕ್ಷ ಇಸಾಕಬಾಷಾ ಹರಪನಹಳ್ಳಿ,ಇರಫಾನ್ ಹರಪನಹಳ್ಳಿ,ಪರಶುರಾಮ, ಮಹಮ್ಮದ, ಮಾಳಪ್ಪ ಹರಿಜನ, ಸೋಮಣ್ಣ ಮೇಲ್ಮರಿ, ಬಸಣ್ಣ, ಸೇರಿದಂತೆ ಅನೇಕರು ಹಾಜರಿದ್ದರು.
