ಗದಗ: ಮಹಾಶಿವರಾತ್ರಿಯ ಅಂಗವಾಗಿ ಆಂಧ್ರಪ್ರದೇಶ ರಾಜ್ಯದ ನಂದ್ಯಾಲ ಜಿಲ್ಲೆಯ ಶ್ರೀಶೈಲದಲ್ಲಿ ಮಲ್ಲಿಕಾರ್ಜುನ ಜಾತ್ರಾಮಹೋತ್ಸವದ ಅಂಗವಾಗಿ ಮಹಾರಥೋತ್ಸವ ಅಪಾರ ಭಕ್ತ ಜನಸಾಗರದ ಮಧ್ಯೆ ಗುರುವಾರ ವಿಜೃಂಭಣೆಯಿಂದ ಜರುಗಿತು.
ಸಹಸ್ರಾರು ಭಕ್ತರು ರಥೋತ್ಸವಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ತಮ್ಮ ಇಷ್ಟಾರ್ಥಗಳನ್ನು ಪೂರೈಸುವಂತೆ ಶ್ರೀಶೈಲ ಮಲ್ಲಿಕಾರ್ಜುನನಲ್ಲಿ ತಮ್ಮ ಭಕ್ತಿ ಸಮರ್ಪಿಸಿದರು.

ಕರ್ನಾಟಕ ರಾಜ್ಯ ಸೇರಿ ಗದಗ ಜಿಲ್ಲೆಯಿಂದಲೂ ಅನೇಕ ಭಕ್ತರು ಪಾಲ್ಗೊಂಡು ರಥೋತ್ಸವದಲ್ಲಿ ಭಾಗಿಯಾಗಿ ಶ್ರೀಶೈಲ ಮಲ್ಲಿಕಾರ್ಜುನನ ಕೃಪೆಗೆ ಪಾತ್ರರಾದರು.ಗದಗ ಜಿಲ್ಲೆಯಿಂದಲೂ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ, ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯ ಹಾಗೂ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಅಶೋಕ ಮಂದಾಲಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡಿದ್ದರು.