ಬೆಂಗಳೂರು: ಕೋವಿಡ್ ಅಕ್ರಮ ಆರೋಪ ಪ್ರಕರಣದ ತನಿಖೆಗಾಗಿ ಎಸ್‌ಐಟಿ ರಚಿಸಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ತೀರ್ಮಾನಿಸಿದೆ. ಇನ್ನೂ 2-3 ದಿನಗಳಲ್ಲಿ ಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್‌ಐಟಿ ರಚನೆ ಆಗಲಿದ್ದು, ಬಳಿಕ ಬಿಎಸ್‌ವೈ ವಿರುದ್ಧ ಎಫ್‌ಐಆರ್ ದಾಖಲಾಗಲಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ. ಇದರೊಂದಿಗೆ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಕ್ಯಾಬಿನೆಟ್ ಸಚಿವರಿಂದ ಆಗ್ರಹ ಕೇಳಿಬಂದಿದೆ ಎಂದು ಮೂಲಗಳು ತಿಳಿಸಿವೆ.
ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ ಕುನ್ಹಾ ನೇತೃತ್ವದ ಆಯೋಗ ನೀಡಿದ ವರದಿ ಆಧಾರದ ಮೇಲೆ ಸಚಿವ ಸಂಪುಟ ಈ ನಿರ್ಣಯಕ್ಕೆ ಬಂದಿದೆ. ಇದೇ ವೇಳೆ, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮಾನ್ಯತೆಗೆ ಷರತ್ತುಗಳನ್ನು ಸಡಿಲ ಮಾಡಲು ಒಪ್ಪಿಗೆ ಸೂಚಿಸಿದೆ. ಶೇ.50ರಷ್ಟು ಸೀಟುಗಳಿಗೆ ಕಡ್ಡಾಯವಾಗಿ ಅಲ್ಪ ಸಂಖ್ಯಾತ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಬೇಕು ಎಂಬ ನಿಯಮಕ್ಕೆ ಕೊಕ್ ನೀಡಿದೆ.