ಬೆಳಗಾವಿ: ಬೆಳಗಾವಿಯ ಚಳಿಗಾಲ ಅಧಿವೇಶನ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ಹಾಗೂ ಪರಿಹಾರ ಕಂಡುಕೊಳ್ಳುವದಕ್ಕಾಗಿ ಇದೆ.ಹೀಗಾಗಿ ಅಧಿವೇಶನ ಅರ್ಥಪೂರ್ಣವಾಗಿ ನಡೆಯಬೇಕೆಂಬುದು ನಮ್ಮ ಉದ್ದೇಶ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.
ಹೋರಾಟಕ್ಕೆ ಸಜ್ಜಾಗಿರೋ ಬಿಜೆಪಿಗೆ ಕಿವಿಮಾತು ಹೇಳಿರೋ ಹೊರಟ್ಟಿ ಅವರು, ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚಿಸಲು 20 ಕೋಟಿ ರೂ. ಖರ್ಚು ಮಾಡಿ ಸದನ ನಡೆಸಲಾಗುತ್ತಿದೆ. ಹೀಗಾಗಿ 2 ವಾರಗಳಲ್ಲಿ 4 ದಿನ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚಿಸಲು ಮೀಸಲು ಇಡಲಾಗಿದೆ. ಮಂಗಳವಾರ, ಬುಧವಾರ ಸುದೀರ್ಘವಾಗಿ ಚರ್ಚಿಸಲು ಅವಕಾಶ ಮಾಡಿಕೊಡಲಾಗುವದು. ಹೀಗಾಗಿ ಬಿಜೆಪಿ ಇದನ್ನ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಅವರು ವಿನಂತಿಸಿದ್ದಾರೆ.