ಗದಗ ( ಲಕ್ಷ್ಮೇಶ್ವರ ): ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಶಿರಹಟ್ಟಿ ಪಿಎಸ್ಐ ಈರಣ್ಣ ರಿತ್ತಿ ಅವರನ್ನು ಜಿಲ್ಲೆಯಿಂದ ಬೇರೆ ವಿಭಾಗಕ್ಕೆ ವರ್ಗಾಯಿಸಿ ಸೂಕ್ತ ಶಿಸ್ತು ಕ್ರಮ ಜರುಗಿಸುವಂತೆ ಆಗ್ರಹಿಸಿ ಶ್ರೀರಾಮ ಸೇನಾ, ಲಕ್ಷ್ಮೇಶ್ವರ ಘಟಕದ ವತಿಯಿಂದ ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ವರದಿ : ಪರಮೇಶ ಎಸ್ ಲಮಾಣಿ
ಶ್ರೀರಾಮ ಸೇನಾ ತಾಲೂಕಾ ಅಧ್ಯಕ್ಷ ಈರಣ್ಣ ಪೂಜಾರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಹಿಂದೂಗಳ ಮೇಲೆ ದೌರ್ಜನ್ಯ ಹೆಚ್ಚಿದೆ. ಸರ್ಕಾರ ಹಿಂದೂಗಳ ಮೇಲೆ ವಿವಿಧ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಹಿಂದೂಗಳನ್ನು ಸದೆಬಡೆಯಲು ಪ್ರಯತ್ನಿಸುತ್ತಿದೆ.
ಜಿಲ್ಲಾದ್ಯಂತ ಮುಗ್ಧ ಹಿಂದೂಗಳು ಸರ್ಕಾರಿ ಅಧಿಕಾರಿಗಳ ದೌರ್ಜನ್ಯದಿಂದ ನಲುಗಿದ್ದಾರೆಂದು ಆರೋಪಿಸಿದರು. ನ. 10ರಂದು ಶಿರಹಟ್ಟಿ ಪಿಎಸ್ಐ ಈರಣ್ಣ ರಿತ್ತಿ ಸುಮ್ಮನೆ ಮನೆಯಲ್ಲಿದ್ದ ದೇವಿಹಾಳ ತಾಂಡಾದ ಸೋಮಪ್ಪ ಲಮಾಣಿ ಎಂಬ ವ್ಯಕ್ತಿಯ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಮನಸೋಇಚ್ಛೆ ಥಳಿಸಿದ್ದಾರೆ. ಈ ಅಧಿಕಾರಿಯ ಥಳಿತದಿಂದ ಸೋಮಪ್ಪ ಲಮಾಣಿಯ ಮರ್ಮಾಂಗಕ್ಕೆ ತೀವ್ರವಾಗಿ ಗಾಯವಾಗಿದೆ.
ಶಿರಹಟ್ಟಿ ಪಿಎಸ್ಐ ಈರಣ್ಣ ರಿತ್ತಿ ಮನಸೋ ಇಚ್ಛೇ ಥಳಿಸಿ, ಜಾತಿನಿಂದನೆ ಮಾಡಿ ಸಮಸ್ತ ಲಂಬಾಣಿ ಜನಾಂಗವನ್ನು ಅವಮಾನಿಸಿದ್ದಾರೆಂದು ಆರೋಪಿಸಿದರು.7 ದಿನದೊಳಗಾಗಿ ಶಿರಹಟ್ಟಿ ಪಿಎಸ್ಐ ಈರಣ್ಣ ರಿತ್ತಿ ಮೇಲೆ ಯಾವುದೇ ಕ್ರಮ ಜರುಗಿಸದಿದ್ದಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಸಂದರ್ಭದಲ್ಲಿ ಶ್ರೀರಾಮ ಸೇನಾ ತಾಲೂಕು ಅಧ್ಯಕ್ಷ ಈರಣ್ಣ ಪೂಜಾರ, ಬಾಳಪ್ಪ ಗೋಸಾವಿ, ಬಸವರಾಜ ಚಕ್ರಸಾಲಿ, ಹರೀಶ ಗೋಸಾವಿ, ಬಸವರಾಜ ಆಲೂರ,ಆದೇಶ ಸವಣೂರ,ಕುಮಾರ ಕಣವಿ,ಪ್ರಾಣೇಶ ವ್ಯಾಪಾರಿ,ಪ್ರವೀಣ ಗುಡಗೇರಿ,ಹನುಮಂತ ರಾಮಗೇರಿ,ಕಿರಣ ಚಿಲ್ಲೂರಮಠ, ವೆಂಕಟೇಶ ಗೋಸಾವಿ,ವಿನಾಯಕ ಸವಡ್ಲ,ಪ್ರಕಾಶ ಕುಂಬಾರ,ಪವನ ಹಗರದ, ಆಕಾಶ ಕುಂಬಾ, ಈರಣ್ಣ ಕುಂಬಾರ ಚಿನ್ನು ಹಾಳದೊಟದ, ಕೃಷ್ಣ ಗೋಸಾವಿ ಮತ್ತಿತರಿದ್ದರು.
