ಲಕ್ಷ್ಮೇಶ್ವರ: ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನೆಲೆ, ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿರೋ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ.
ಸಂಜೆ 4.30 ಕ್ಕೆ ಬಿಡಬೇಕಾಗಿದ್ದ ಬಸ್ಸು 6 ಗಂಟೆಯಾದ್ರೂ ಹೊರಟಿದ್ದಿಲ್ಲ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ದಿಢೀರ್ ಪ್ರತಿಭಟನೆ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಲಕ್ಷ್ಮೇಶ್ವರ ಬಸ್ ನಿಲ್ದಾಣ ಎದುರು ಪಾಲಾ ಬದಾಮಿ ರಸ್ತೆ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬಸ್ ತಡವಾಗಿದ್ದರಿಂದ ಪ್ರಾಥಮಿಕ ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರದಾಟ ಅನುಭವಿಸುವಂತವಾಯಿತು.
ಬೆಳಿಗ್ಗೆ 8 ಗಂಟೆಗೇನೆ ವಿವಿಧ ಗ್ರಾಮಗಳಿಂದ ಮನೆಯಿಂದ ಶಾಲೆಗೆ ಹೊರಟ ಮಕ್ಕಳು ಸರಿಯಾದ ಸಮಯಕ್ಕೆ ಬಸ್ ಬಿಡದ ಕಾರಣ ಹಸಿವಿನಿಂದ ಗೋಳಾಟ ನಡೆಸುವಂತಾಯಿತು.
ಕುಂದ್ರಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ದಿನನಿತ್ಯ ಒಂದಲ್ಲಾ ಒಂದು ಸಮಸ್ಯೆ ಎದುರಿಸುತ್ತಿದ್ದು, ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ರು.