ನರಗುಂದ:ಸಮರ್ಪಕವಾಗಿ ಬಸ್ ಬಿಡುವಂತೆ ಒತ್ತಾಯಿಸಿ ಗದಗ ಜಿಲ್ಲೆ ನರಗುಂದ ತಾಲೂಕಿನ ಬೈರನಹಟ್ಟಿ ಗ್ರಾಮದಲ್ಲಿ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಬೈರನಹಟ್ಟಿ ಗ್ರಾಮ ಪಂಚಾಯತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಬೈರನಹಟ್ಟಿ ಗ್ರಾಮದಿಂದ ನರಗುಂದ ಪಟ್ಟಣಕ್ಕೆ ಹೋಗಲು ಬಸ್ ವ್ಯವಸ್ಥೆ ಇಲ್ಲ. ಲಾಂಗ್ ರೂಟ್ ಬಸ್ ಗಳು ಸ್ಟಾಪ್ ಆಗುತ್ತಿಲ್ಲ. ಇತ್ತ ನರಗುಂದ ಹಾಗೂ ಬಾಗಲಕೋಟಿ ಬಸ್ ಗಳೂ ಸಹ ನಿಲುಗಡೆ ಆಗುತ್ತಿಲ್ಲ.
ಸರಿಯಾದ ಸಮಯಕ್ಕೆ ಶಾಲೆ, ಹಾಗೂ ಕಾಲೇಜಿಗೆ ಹೋಗಿ ಬರಲು ಆಗುತ್ತಿಲ್ಲ. ಬಸ್ ವ್ಯವಸ್ಥೆ ಇಲ್ಲದೆ ಶಾಲೆ ಹಾಗೂ ಕಾಲೇಜು ಬಿಡುವಂತ ಸ್ಥಿತಿ ನಿರ್ಮಾಣವಾಗಿದೆ.
ಹೀಗಾಗಿ ನರಗುಂದ ಹಾಗೂ ಬೈರನಹಟ್ಟಿ ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಒತ್ತಾಯಿಸಿ, ಗ್ರಾಮ ಪಂಚಾಯತಿ ಕಚೇರಿ ಹಾಗೂ ನರಗುಂದ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.