ಇಂದು ಬೆಳ್ಳಂಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪ ಸಂಭವಿಸಿದ ಲಾರಿ ಅಪಘಾತದಲ್ಲಿ ಹಾವೇರಿ ಜಿಲ್ಲೆ ಸವಣೂರು ಪಟ್ಟಣದ 10 ಹತ್ತು ಜನ ಸಾವನ್ನಪ್ಪಿದ್ದಾರೆ. ಹಾಗೂ ಸಿಂಧನೂರ ಬಳಿ ನಡೆದ ಕ್ರೂಸರ್ ವಾಹನ ಪಲ್ಟಿಯಾಗಿ 4 ಜನ ಸಾವನ್ನಪ್ಪಿದ್ದರು.
ರಾಜ್ಯ ಸರ್ಕಾರ ಯಲ್ಲಾಪುರ ಹಾಗೂ ರಾಯಚೂರು ಬಳಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಸಾವನ್ನಪ್ಪಿರುವ 14 ಜನರ ಕುಟುಂಬಳಿಗೆ ಈಗಾಗಲೇ ತಲಾ 3 ಲಕ್ಷ ಘೋಷಿಸಿದ್ದಾರೆ.

ಇದೀಗ ಕೇಂದ್ರ ಸರ್ಕಾರ ಕೂಡ ಮೃತರ ಪ್ರತಿ ಕುಟುಂಬಗಳಿಗೆ ತಲಾ 2. ಲಕ್ಷ ಘೋಶಿಸಿದ್ದಾರೆ. ಅಲ್ಲದೇ ಅಪಘಾತಕ್ಕೆ ಸಂತಾಪ ಸೂಚಿಸಿರುವ ಮೋದಿ, ಅಪಘಾತದಲ್ಲಿ ಪ್ರಾಣಹಾನಿಯಿಂದ ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ. ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಸಂತಾಪ ಸೂಚಿಸುವದರೊಂದಿಗೆ, ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.