6
ಗದಗ: ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರೋ ಘಟನೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮ್ ಬಳಿ ನಡೆದಿದೆ.
ಗಂಗಾವತಿ ಮೂಲದ ಶಂಕರ್ ಅನ್ನುವವರು ಕಾರ್ ಚಾಲನೆ ಮಾಡುತ್ತಿದ್ದರು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನಜಾವ ಈ ಅಪಘಾತ ಸಂಭವಿಸಿದ್ದು, ಚಾಲಕ ಗಂಗಾವತಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಎನ್ನಲಾಗಿದೆ.
ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪಲ್ಟಿಯಾಗಿದ್ದ ಕಾರನ್ನ ಸ್ಥಳಾಂತರಿಸಿ,ರಸ್ತೆ ಸಂಚಾರಕ್ಕೆ ಅನುವು ಮಾಡಿದ್ದಾರೆ.
ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.