ಲಕ್ಷ್ಮೇಶ್ವರ: ವಿಶ್ವದ ಏಳಿಗೆಗೆ ವಿಶ್ವಮಾನವತೆಯ ಸಂದೇಶವೊಂದೇ ಪರಿಹಾರ. ಅಂತಹ ವಿಶ್ವಮಾನವತೆ ಸಂದೇಶ ಸಾರಿದ ಕುವೆಂಪು ನಮ್ಮ ಕನ್ನಡದ ಅಸ್ಮಿತೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಉಮೇಶ ನೇಕಾರ ಅಭಿಪ್ರಾಯ ಪಟ್ಟರು.
ಅವರು ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಲಕ್ಷ್ಮೇಶ್ವರದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಕವಿ ಕುವೆಂಪುರವರ ೧೨೧ನೇ ಜಯಂತಿ ಹಾಗೂ ವಿಶ್ವಮಾನವ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕ ಅಧ್ಯಕ್ಷ ಈಶ್ವರ ಮೆಡ್ಲೇರಿ ಮಾತನಾಡಿ ಕುವೆಂಪು ಕನ್ನಡದ ಶ್ರೇಷ್ಠ ಚಿಂತನೆಗಳಿಗೆ ಜಾಗತಿಕ ಸ್ಥಾನಮಾನ ಒದಗಿಸಿದವರು. ಕನ್ನಡತನವನ್ನು ಆಗಸದೆತ್ತರಕ್ಕೆ ಏರಿಸಿದವರು. ವಿಶೇಷವಾಗಿ ಸಮ ಸಮಾನ ಸಮಾಜದ ಇಂದಿನ ಅವಶ್ಯಕತೆಯನ್ನು ಸಾರಿ ಹೇಳಿದವರು. ಅವರ ಜನ್ಮ ಜಯಂತಿ ನಮ್ಮೆಲ್ಲರ ಜಾಗೃತಿ ಎಂದರು.
ಶಿಕ್ಷಕ ಎಂ.ಎಚ್ ದಿಂಡವಾಡ ಮಾತನಾಡಿ ಕುವೆಂಪುರವರಿಲ್ಲದ ಕನ್ನಡವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು. ಸಮಾಜ ಕಲ್ಯಾಣ ಇಲಾಖೆಯ ಎಚ್.ಎಂ.ಅರಳಿಹಳ್ಳಿ ಮಾತನಾಡಿದರು.ಸಾಹಿತ್ಯ ಪರಿಷತ್ತಿನ ಸಲಹಾ ಸಮಿತಿಯ ಹಿರಿಯರಾದ ಎಸ್.ಐ.ಆಲೂರ ಅಧ್ಯಕ್ಷೀಯ ನುಡಿಗಳನ್ನು ಆಡಿದರು.
ಕಾರ್ಯಕಾರಿ ಸಮಿತಿಯ ಸದಸ್ಯ ಹೆಚ್.ಎಂ.ಗುತ್ತಲ ಸ್ವಾಗತಿಸಿದರು. ಕ.ಸಾ.ಪ ಸಂಘಟನಾ ಕಾರ್ಯದರ್ಶಿ ನಾಗರಾಜ ಮಜ್ಜಿಗುಡ್ಡ ಕಾರ್ಯಕ್ರಮ ನಿರೂಪಿಸಿದರು. ಸಲಹಾ ಸಮಿತಿಯ ಹಿರಿಯ ಸದಸ್ಯ ಎಸ್.ಬಿ.ಅಣ್ಣಿಗೇರಿ ವಂದಿಸಿದರು.ಆರಂಭದಲ್ಲಿ ಅಗಲಿದ ಮಾಜಿ ಪ್ರಧಾನಿ ಮನಮೋಹನ ಸಿಂಗ್ ರವರಿಗೆ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.ಅತಿಥಿಗಳು ಗಣ್ಯರು ಹಾಗೂ ವಿದ್ಯಾರ್ಥಿಗಳೆಲ್ಲರೂ ಸೇರಿ ನಾಡಗೀತೆಯನ್ನು ಹಾಡಿದರು.ಸಮಾಜ ಕಲ್ಯಾಣ ಇಲಾಖೆಯ ಸಿದ್ದಣ್ಣ ಕಳಸಣ್ಣವರ ಹಾಗೂ ಪದವಿಪೂರ್ವ, ಪದವಿ ಕಾಲೇಜ್ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು.