ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕರ್ನಾಟಕದ ಮೂವರು ಆಟಗಾರರು ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಎ ತಂಡದ ಭಾಗವಾಗಿದ್ದ ದೇವದತ್ ಪಡಿಕ್ಕಲ್ ಆಸ್ಟ್ರೇಲಿಯಾ ಎ ವಿರುದ್ಧ ಸರಣಿ ಮುಗಿದ ಅಲ್ಲೇ ಉಳಿಯುವಂತೆ ಕೇಳಲಾಗಿದೆ. ಇದೀಗ ಬಾರ್ಡರ್-ಗವಾಸ್ಕರ್ ಟ್ರೋಫಿ (ಬಿಜಿಟಿ) 2024-25ರ ತಂಡಕ್ಕೆ ಸೇರಿಸಲಾಗಿದ್ದು, ಮೊದಲ ಟೆಸ್ಟ್ನಲ್ಲಿ ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಪಂದ್ಯಕ್ಕೆ ಭಾರತ ತಂಡ ಸಜ್ಜಾಗುತ್ತಿದೆ. ನವೆಂಬರ್ 22ರಂದು ಪರ್ತ್ನಲ್ಲಿ ಮೊದಲ ಟೆಸ್ಟ್ ನಡೆಯಲಿದ್ದು, ಆಸ್ಟ್ರೇಲಿಯಾ ಬೌಲರ್ ಗಳನ್ನು ಎದುರಿಸಲು ಭಾರತದ ಬ್ಯಾಟಿಂಗ್ ಪಡೆ ಭರ್ಜರಿ ಅಭ್ಯಾಸ ನಡೆಸುತ್ತಿದೆ. ನಾಯಕ ರೋಹಿತ್ ಶರ್ಮಾ ಮೊದಲ ಟೆಸ್ಟ್ಗೆ ಅಲಭ್ಯರಾಗಿರುವ ಕಾರಣ ಜಸ್ಪ್ರೀತ್ ಬುಮ್ರಾ ಮೊದಲ ಪಂದ್ಯಕ್ಕೆ ನಾಯಕತ್ವ ವಹಿಸಲಿದ್ದಾರೆ. ರೋಹಿತ್ ಇಲ್ಲದ ಕಾರಣ ಮೊದಲ ಟೆಸ್ಟ್ಗೆ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ.
ಮೊದಲ ಟೆಸ್ಟ್ಗೆ ಭಾರತ ತಂಡ
ಜಸ್ಪ್ರೀತ್ ಬುಮ್ರಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.